ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಸಾಂಸ್ಕೃತಿಕ ಜಾಂಬೂರಿ – 12 ಎಕ್ರೆ ಪ್ರದೇಶದಲ್ಲಿ ಕೃಷಿ ಮೇಳ ; ಡಾ| ಎಂ. ಮೋಹನ ಆಳ್ವ ಅವರು ಪತ್ರಿಕಾಗೋಷ್ಠಿ – ಕಹಳೆ ನ್ಯೂಸ್
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಡಿ. 21ರಿಂದ 27ರ ವರೆಗೆ ನಡೆಯಲಿರುವ “ಅಂತಾರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್ ಸಾಂಸ್ಕೃತಿಕ ಜಾಂಬೂರಿ’ ವೇಳೆ 12 ಎಕ್ರೆ ಜಾಗದಲ್ಲಿ ಕೃಷಿ ಮೇಳ ನಡೆಸಲು ಸಕಲ ಸಿದ್ಧತೆಗಳಾಗುತ್ತಿದೆ ಎಂದು ಜಾಂಬೂರಿ ಪ್ರಧಾನ ಕಾರ್ಯದರ್ಶಿ, ದ.ಕ.ಜಿಲ್ಲಾ ಸ್ಕೌಟ್ಸ್ ಗೈಡ್ಸ್ ಮುಖ್ಯ ಆಯುಕ್ತ ಡಾ| ಎಂ. ಮೋಹನ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಹೆಸರಿನ ಆವರಣದಲ್ಲಿ 4 ಎಕರೆ ಜಾಗದಲ್ಲಿ 100 ಬಗೆಯ...