ಎಲ್ಲರಿಗೂ ಸಮಾನ ನ್ಯಾಯ ಒದಗಿಸುವುದೇ ಪೋಲಿಸ್ ಇಲಾಖೆಯ ಮುಖ್ಯ ಧ್ಯೇಯ :-ಸಂದೇಶ್ ಪಿ ಜಿ ಅಭಿಮತ-ಕಹಳೆ ನ್ಯೂಸ್
ಮೂಡುಬಿದಿರೆ: ಪೋಲಿಸ್ ಕೆಲಸ ತುಂಬಾ ಪವಿತ್ರವಾದ ಕೆಲಸ, ಎಲ್ಲಿ ಮನುಷ್ಯರಿರುತ್ತಾರೆಯೋ ಅಲ್ಲಿ ಗಲಾಟೆ, ಗಲಭೆಗಳಿರುತ್ತವೆ. ಆದರೆ ಅವೆಲ್ಲವನ್ನು ಹಿಡಿತಕ್ಕೆ ತಂದು ಸಾರ್ವಜನಿಕರಲ್ಲಿ ಶಾಂತಿಯ ಬದುಕು ನಿರ್ಮಿಸುವುದು ನಮ್ಮ ಕರ್ತವ್ಯವಾಗಿದೆ. ಎಲ್ಲರಿಗೂ ಸಮಾನವಾದ ನ್ಯಾಯ ಒದಗಿಸುವುದೇ ಪೊಲೀಸ್ ಇಲಾಖೆಯ ಮುಖ್ಯ ಧ್ಯೇಯ ಎಂದು ಮೂಡುಬಿದಿರೆಯ ಪೊಲೀಸ್ ವೃತ್ತ ನಿರೀಕ್ಷಕರಾದ ಸಂದೇಶ್ ಪಿ ಜಿ ಯವರು ಅಭಿಪ್ರಾಯಪಟ್ಟರು. ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಪೊಲೀಸ್ ಸಹಕಾರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ...