Sunday, January 19, 2025

ಮೂಡಬಿದಿರೆ

ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ : ಕಂಬಳ ಅನುದಾನ ಬಿಡುಗಡೆ ವಿಳಂಬ ಆಗ್ರಹಿಸಿ ಜೂ.19ಕ್ಕೆ ಸಿಎಂ, ಸಚಿವರ ಭೇಟಿ, ಮಾತುಕತೆ : ಜಿಲ್ಲಾ ಕಂಬಳ ಸಮಿತಿ ಸಮಾಲೋಚನಾ ಸಭೆಯಲ್ಲಿ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು – ಕಹಳೆ ನ್ಯೂಸ್

ಮೂಡುಬಿದಿರೆ: ಅವಿಭಜಿತ ಜಿಲ್ಲೆಯಲ್ಲಿ ನಡೆಯುವ ಪ್ರತಿ ಕಂಬಳಕ್ಕೆ ಸರಕಾರವು ತಲಾ 5ಲಕ್ಷ ರೂ. ಅನುದಾನವನ್ನು ಹಿಂದೆ ನೀಡುತ್ತಿತ್ತು ಆದರೆ ಪ್ರಸಕ್ತ ವರ್ಷದಲ್ಲಿ ಬಿಡುಗಡೆಯಾಗಿಲ್ಲ. ಶೀಘ್ರದಲ್ಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಜೂ.19ರಂದು ಜಿಲ್ಲಾ ಕಂಬಳ ಸಮಿತಿಯಿಂದ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡುವ ಕುರಿತು ಸಮಾಜ ಮಂದಿರದಲ್ಲಿ ನಡೆದ ಜಿಲ್ಲಾ ಕಂಬಳ ಸಮಿತಿಯಿಂದ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಸರ್ಕಾರದ ಅನುದಾನ ಬಿಡುಗಡೆ ಕುರಿತು ಸಮಿತಿಯ ಪದಾಧಿಕಾರಿಗಳು, ಕಂಬಳಗಳ ವ್ಯವಸ್ಥಾಪಕರ ಜೊತೆ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಪಾಣರ ಅಜಿಲ ಯಾನೆ ನಲಿಕೆ ಯವರ ಸಮಾಜ ಸೇವಾ ಸಂಘದ 3ನೇ ವಾರ್ಷಿಕೋತ್ಸವ :  ಪುಸ್ತಕ ವಿತರಣೆ, ಸಮಾಜ ಸೇವಕಗೆ ಸನ್ಮಾನ– ಕಹಳೆ ನ್ಯೂಸ್

ಮೂಡುಬಿದಿರೆ ತಾಲೂಕು ಪಾಣರ ಅಜಿಲ ಯಾನೆ ನಲಿಕೆ ಯವರ ಸಮಾಜ ಸೇವಾ ಸಂಘದ 3ನೇ ವಾರ್ಷಿಕೋತ್ಸವ-ಪುಸ್ತಕ ವಿತರಣೆ-ಸಮ್ಮಾನ ಕಾರ್ಯಕ್ರಮವು ಸಮಾಜ ಮಂದಿರದಲ್ಲಿ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಉದ್ಯಮಿ ಶ್ರೀಪತಿ ಭಟ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಹಕ್ಕು ಇದೆ. ಶಿಕ್ಷಣದಿಂದ ಸಮಾಜದ ಬೆಳವಣಿಗೆ ಸಾಧ್ಯ ಆದ್ದರಿಂದ ಸಮಾಜದ ಎಲ್ಲಾ ಮಕ್ಕಳು ಶಿಕ್ಷಣವನ್ನು ಪಡೆಯುವಂತ್ತಾಗಬೇಕು ಎಂದ ಅವರು ಸಂಘದ ಎಲ್ಲ ಚಟುವಟಿಕೆಗಳಿಗೆ ತುಂಬು ಪ್ರೋತ್ಸಾಹ ನೀಡುವುದಾಗಿ...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ದ.ಕ ಜಿಲ್ಲಾ ಸಂಸ್ಥೆ ಮೂಡುಬಿದಿರೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗದಲ್ಲಿ ಸ್ಕೌಟ್ಸ್ ಗೈಡ್ಸ್ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡುಬಿದಿರೆ: ಭಾರತ್ ಸ್ಕೌಟ್ಸ್ ಗೈಡ್ಸ್ ಕರ್ನಾಟಕ, ದ.ಕ ಜಿಲ್ಲಾ ಸಂಸ್ಥೆ ಮೂಡುಬಿದಿರೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಿರುವ ಸ್ಕೌಟ್ಸ್ ಗೈಡ್ಸ್, ರೋರ್ಸ್ ಮತ್ತು ರೇಂಜರ್ಸ್ ಗಳಿಗೆ  ಅಭಿನಂದನಾ ಕಾರ್ಯಕ್ರಮ ನಡೆಯಿತು. ಭಾರತ ಸ್ಕೌಟ್ಸ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸ್ಕೌಟ್ಸ್ ಗೈಡ್ಸ್ ರಾಜಕೀಯೇತರ ಶೈಕ್ಷಣಿಕ ಆಂದೋಲನವಾಗಿದ್ದು ಮಕ್ಕಳಲ್ಲಿ ಬೌದ್ಧಿಕ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಆಳ್ವಾಸ್‌ನಲ್ಲಿ ಹಲಸು, ಹಣ್ಣುಗಳು, ಆಹಾರೋತ್ಸವ, ಕೃಷಿ ಮಹಾಮೇಳ ಸಂಸ್ಕೃತಿ ಮೂಲವೇ ಕೃಷಿ: ನಳಿನ್ ಕುಮಾರ್-ಕಹಳೆ ನ್ಯೂಸ್

ಮೂಡುಬಿದಿರೆ:‘ಭಾರತೀಯ ಸಂಸ್ಕೃತಿಯ ಮೂಲವೇ ಕೃಷಿ. ಕೃಷಿಯನ್ನು ಪ್ರೋತ್ಸಾಹಿಸುವ ಮೂಲಕ ‘ಆಳ್ವಾಸ್’ ನೆಲದ ಸಂಸ್ಕೃತಿಯನ್ನು ಪೋಷಿಸುವ ಕೆಲಸ ಮಾಡುತ್ತಿದೆ’ ಎಂದು ನಿಕಟಪೂರ್ವ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ವೇದಿಕೆಯಲ್ಲಿ ಕೃಷಿಋಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ನಡೆಯಲಿರುವ ಎರಡನೇ ವರ್ಷದ ‘ಸಮೃದ್ಧಿ’ -ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳದ ಉದ್ಘಾಟನಾ ಸಮಾರಂಭದಲ್ಲಿ...
ದಕ್ಷಿಣ ಕನ್ನಡಮೂಡಬಿದಿರೆಯಕ್ಷಗಾನ / ಕಲೆಶಿಕ್ಷಣಸುದ್ದಿ

ಆಳ್ವಾಸ್ ನ ಕೃಷಿಸಿರಿ ವೇದಿಕೆಯಲ್ಲಿ ನಡೆದ “ಆಳ್ವಾಸ್ ಸಾಂಪ್ರದಾಯಿಕ ದಿನ- 2024” ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಓರ್ವ ಉತ್ತಮ ಶಿಕ್ಷಕ, ಎಂಜಿನಿಯರ್ ಅಥವಾ ಕಲಾವಿದನಾಗಿ ರೂಪುಗೊಳ್ಳುವಂತೆ ಆಳ್ವಾಸ್ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುತ್ತಿರುವುದಲ್ಲದೆ ಓರ್ವ ಮನುಷ್ಯನಿಗೆ ಮನುಷ್ಯತ್ವದ ಗುಣವನ್ನು ಕಲಿಸುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ನಟ, ಕಲಾ ನಿರ್ದೇಶಕ ಅರುಣ್ ಸಾಗರ್ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಕೃಷಿಸಿರಿ ವೇದಿಕೆಯಲ್ಲಿ ನಡೆದ "ಆಳ್ವಾಸ್ ಸಾಂಪ್ರದಾಯಿಕ ದಿನ- 2024" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಪಾಸ್ ಫೈಲ್...
ದಕ್ಷಿಣ ಕನ್ನಡಪುತ್ತೂರುಮೂಡಬಿದಿರೆಸುದ್ದಿ

ಮೂಡಬಿದ್ರೆ ಆಳ್ವಾಸ್‌ನಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳ : ಶಾಸಕ ಅಶೋಕ್ ರೈ ಟ್ರಸ್ಟ್ ಮೂಲಕ 750 ಉದ್ಯೋಗಾಂಕ್ಷಿಗಳು ಮೇಳದಲ್ಲಿ ಭಾಗಿ-ಕಹಳೆ ನ್ಯೂಸ್

ಪುತ್ತೂರು: ಕಲಿಕೆಯ ಧ್ಯೇಯ ಉದ್ಯೋಗ ಗಳಿಸುವುದಾಗಿದೆ ಆದರೆ ಎಲ್ಲರಿಗೂ ಇಲ್ಲಿ ಸರಕಾರಿ ಉದ್ಯೋಗ ಸಿಗುತ್ತದೆ ಎಂಬ ಖಾತ್ರಿಯಿಲ್ಲದೇ ಇರುವ ಕಾರಣ ಖಾಸಗಿ ಸಂಸ್ಥೆಗಳಲ್ಲಿ ದಾರಾಳ ಉದ್ಯೋಗಗಳು ದೊರೆಯುತ್ತಿದ್ದು ವಿದ್ಯಾರ್ಥಿಳು ಕಲಿಕೆಯ ವೇಳೆಯೇ ಉದ್ಯೋಗದ ಧ್ಯೇಯವನ್ನು ಹೊಂದರಬೇಕು ಎಂದು ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಇದರ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು. ಅವರು ಮೂಡಬಿದ್ರೆ ಆಳ್ವಾಸ್‌ನಲ್ಲಿ ಜೂ. 7 ಮತ್ತು 8ರಂದು ನಡೆಯಲಿರುವ ಬೃಹತ್ ಉದ್ಯೋಗ ಮೇಳಕ್ಕೆ ರೈ ಚಾರಿಟೇಬಲ್...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ಸ್ಪೂರ್ತಿ ವಿಶೇಷ ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ – ಕಹಳೆ ನ್ಯೂಸ್

ಮೂಡುಬಿದಿರೆ: ಅರಮನೆ ಬಾಗಿಲು ಬಳಿ ಇರುವ ಸ್ಫೂರ್ತಿ ವಿಶೇಷ ಶಾಲೆಯ ಮಕ್ಕಳಿಗೆ ಮಂಗಳೂರಿನ‌ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇದರ ವತಿಯಿಂದ ರೂ.25000 ಮೌಲ್ಯದ ಪಠ್ಯ ಪುಸ್ತಕ, ಕಲಿಕಾ ಸಾಮಗ್ರಿಗಳು ಹಾಗೂ ಹೆಣ್ಣು ಮಕ್ಕಳಿಗಾಗಿ ಸಾನಿಟರಿ ಪ್ಯಾಡ್ ಬರ್ನಿಂಗ್ ಮಿಷನ್ ಅನ್ನು ಕೊಡುಗೆಯಾಗಿ ನೀಡಿದರು. ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಮುಖ್ಯಸ್ಥರಾದ ಅರ್ಜುನ್ ಭಂಡಾರ್ಕರ್ & ಭಾಗ್ಯಶ್ರೀ ಭಂಡಾರ್ಕರ್, ಸ್ಪೂರ್ತಿ ವಿಶೇಷ ಮಕ್ಕಳ ಶಾಲೆಯ ಸಂಸ್ಥಾಪಕ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ ತಾ.ಪಂ.ವತಿಯಿಂದ ಪರಿಸರ ದಿನಾಚರಣೆ– ಕಹಳೆ ನ್ಯೂಸ್

ಮೂಡುಬಿದಿರೆ: ವಿಶ್ವ ಪರಿಸರ ದಿನದ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ ಮತ್ತು ಮೂಡುಬಿದಿರೆ ಥಡ್೯ ಶಾಲೆಯ ಜಂಟಿ ಆಶ್ರಯದಲ್ಲಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎಸ್. ವೆಂಕಟಾಚಲಪತಿ ಅವರು ಗಿಡಗಳನ್ನು ನೆಡುವ ಮೂಲಕ ಚಾಲನೆಯನ್ನು ನೀಡಿದರು. ಶಾಲೆಯ ನಿಯೋಜಿತ ಪ್ರಭಾರ ಮುಖ್ಯ ಶಿಕ್ಷಕ ರಾಬಟ್೯ ಡಿ'ಸೋಜಾ, ತಾ.ಪಂ.ಸಿಬಂದಿ ಅನ್ವಯ ಸಹಿತ ಇತರರು ಈ ಸಂದರ್ಭದಲ್ಲಿದ್ದರು....
1 2 3 4 5 6 24
Page 4 of 24