ಮೂಡುಬಿದಿರೆಯಲ್ಲಿ ಶಿವರಾಮ ಕಾರಂತ ಪ್ರಶಸ್ತಿ ಮತ್ತು ಪುರಸ್ಕಾರ ಪ್ರದಾನ– ಕಹಳೆ ನ್ಯೂಸ್
ಮೂಡುಬಿದಿರೆ: ಬಹು ವಿರಳವಾದ ವ್ಯಕ್ತಿತ್ವವನ್ನು ಹೊಂದಿದ್ದ ಶಿವರಾಮ ಕಾರಂತರು ತಮಗೆ ಅನಿಸಿದ್ದನ್ನು, ಮನಸ್ಸಿಗೆ ಬಂದದನ್ನು ನೇರವಾಗಿ ಹೇಳುತ್ತಿದ್ದರಲ್ಲದೆ ವಿಮರ್ಶೆ ಮಾಡಿ ಜೀವನ ಮಾಡು ಎಂಬ ವಿಚಾರವನ್ನು ಬಿಟ್ಟು ಹೋದವರು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಅವರು ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಮೂಡುಬಿದಿರೆ ಇದರ ವತಿಯಿಂದ ಮೂಡುಬಿದಿರೆ ಕನ್ನಡ ಭವನದ ಮಹಾಕವಿ ರತ್ನಾಕರ ವರ್ಣಿ ವೇದಿಕೆಯಲ್ಲಿ ನಡೆದ 2023ನೇ ಸಾಲಿನ ಶಿವರಾಮ ಕಾರಂತ...