Saturday, April 5, 2025

ಮೂಡಬಿದಿರೆ

ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮಂಗಳೂರು: ಚುನಾವಣಾ ಕರ್ತವ್ಯದಲ್ಲಿದ್ದ ಸಿಬ್ಬಂದಿ ಜಿಲ್ಲಾಧಿಕಾರಿಯವರ ಕಚೇರಿಯಲಿಯೇ ಆತ್ಮಹತ್ಯೆಗೆ ಯತ್ನ –ಕಹಳೆ ನ್ಯೂಸ್

ಮಂಗಳೂರು: ಚುನಾವಣೆಯ ಕರ್ತವ್ಯದಲ್ಲಿದ್ದ ಸಿಬ್ಬಂದಿಯೊಬ್ಬರು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ತಕ್ಷಣ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಗರದ ಜಿಲ್ಲಾ ಚುನಾವಣಾಧಿಕಾರಿ ಕಚೇರಿಯ ಏಕಗವಾಕ್ಷಿ ಪದ್ಧತಿ ತಂಡದ ಸದಸ್ಯ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. 2019ರಿಂದ ಬೆಳ್ತಂಗಡಿಯ ಕಡಿರುದ್ಯಾವರ ಪಂಚಾಯತ್ ವ್ಯಾಪ್ತಿಯಲ್ಲಿ ಪಿಡಿಒ ಆಗಿ ಕರ್ತವ್ಯದಲ್ಲಿದ್ದ ಅವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಕಳೆದ ಫೆಬ್ರವರಿ ಹಾಗೂ...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಮೂಡಬಿದಿರೆ : ಆಳ್ವಾಸ್ ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪ್ರಾರಂಭ – ಕಹಳೆ ನ್ಯೂಸ್

ಮೂಡಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಬೆಂಗಳೂರಿನ ವಿಜಯ ನಗರದ ಸಾಧನಾ ಕೋಚಿಂಗ್ ಸೆಂಟರ್ ಸಹಯೋಗದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಪ್ರಾರಂಭಿಸುವುದಾಗಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಆಳ್ವ ಮತ್ತು ಸಾಧನಾ ಕೋಚಿಂಗ್ ಸೆಂಟರ್ ನ ಪ್ರವರ್ತಕಿ ಡಾ. ಜ್ಯೋತಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಯುಪಿಎಸ್‍ಸಿ, ಕೆಪಿಎಸ್‍ಸಿ ಸೇರಿದಂತೆ ಪ್ರಮುಖ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಕೋಚಿಂಗ್ ನೀಡಲಾಗುವುದು. ಪದವಿ ಪೂರ್ವ ವಿದ್ಯಾರ್ಥಿಗಳಿಗೆ 6 ತಿಂಗಳ ಫೌಂಡೇಶನ್ ಕೋರ್ಸ್,...
ದಕ್ಷಿಣ ಕನ್ನಡಮೂಡಬಿದಿರೆರಾಜಕೀಯಸುದ್ದಿ

ಮೂಡುಬಿದಿರೆ ಪುರಸಭೆಯಿಂದ ಮತದಾರರ ಜಾಗೃತಿ ಆಂದೋಲನ – ಕಹಳೆ ನ್ಯೂಸ್

ಮೂಡುಬಿದಿರೆ: ಮತದಾನದ ಮಹತ್ವ ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಚುನಾವಣಾಧಿಕಾರಿಯವರ ನಿರ್ದೇಶನದಂತೆ ತಾಲೂಕು ಸ್ವೀಪ್ ಸಮಿತಿ ಮತ್ತು ಮೂಡುಬಿದಿರೆ ಪುರಸಭೆ ವತಿಯಿಂದ ಮತದಾರರ ಜಾಗೃತಿ ಆಂದೋಲನ ಮಂಗಳವಾರ ಮೂಡುಬಿದಿರೆ ಪೇಟೆಯಲ್ಲಿ ನಡೆಯಿತು. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೆ.ರಾಜು ಅವರು ಮತದಾರರನ್ನು ಜಾಗೃತಿ ಮೂಡಿಸುವ ದೊಂದಿಯ ಮೆರವಣಿಗೆಗೆ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ...
ಧಾರವಾಡಮೂಡಬಿದಿರೆಸುದ್ದಿ

ಕಾಂತಾವರ : ಶ್ರೀ ಕ್ಷೇತ್ರ ಕೇಪ್ಲಾಜೆ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಹಾಗೂ ಧ್ವನಿಸುರುಳಿ ಬಿಡುಗಡೆ-ಕಹಳೆ ನ್ಯಸ್

ಮೂಡುಬಿದಿರೆ : ಶ್ರೀ ಕ್ಷೇತ್ರ ಕೇಪ್ಲಾಜೆ ಶ್ರೀ ಮಹಾಮ್ಮಾಯಿ ಹಾಗೂ ಉಚ್ಚಂಗಿ ದೇವಿಗುಡಿಯಲ್ಲಿ ಎಪ್ರಿಲ್ 19 ರಿಂದ 22 ರವರೆಗೆ ಜರಗುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಕಡಂದಲೆ ಬಿಡುಗಡೆಗೊಳಿಸಿದರು. ಸಂಗೀತ ನಿರ್ದೇಶಕರಾದ ಪ್ರಮೋದ್ ಸಪ್ರೆ ರಚಿಸಿ, ಡಾ. ರಮೇಶ್ಚಂದ್ರ ಹಾಡಿರುವ ಕ್ಷೇತ್ರದ ಮಹಾಮ್ಮಾಯಿ ಅಮ್ಮನವರ ಸ್ತುತಿಸುವ ಧ್ವನಿಸುರುಳಿಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅಶೋಕಾನಂದ ಶೆಟ್ಟಿ ಬೇಲಾಡಿಬಾವ ಇವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆಯಲ್ಲಿ ಮತ ಬೇಟೆ ನಡೆಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಮೂಡುಬಿದಿರೆ : ಬಿಜೆಪಿ ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಚುನಾವಣಾ ಅಭ್ಯರ್ಥಿ ಘೋಷಣೆ ನಂತರ ಪ್ರಥಮ ಬಾರಿಗೆ ಮೂಡುಬಿದಿರೆಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ವಿದ್ಯಾಗಿರಿಯಿಂದ ಬೈಕ್ ರಾಲಿ ಮೂಲಕ ಪೇಟೆಗೆ ಅಭ್ಯರ್ಥಿಯನ್ನು ಬಿಜೆಪಿ ಕಾರ್ಯ ಕರ್ತರು ಜಯಗೋಷ ದೊಂದಿಗೆ ಕರೆತಂದರು ಮೂಡುಬಿದಿರೆ ಡಾ ಎಂ.ಮೋಹನ್ ಆಳ್ವ ನಿವಾಸ, ಜೈನಮರ ಸೇರಿದಂತೆ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು. ಸ್ಥಳೀಯ ಮಠಾಧೀಶರೊಂದಿಗೆ ಚರ್ಚೆ ನಡೆಸಿದರು....
ದಕ್ಷಿಣ ಕನ್ನಡಮೂಡಬಿದಿರೆರಾಜಕೀಯಸುದ್ದಿ

ಮೂಲ ಸೌಕರ್ಯ, ಪ್ರವಾಸೋದ್ಯಮ, ಶಿಕ್ಷಣಕ್ಕೆ ಹೆಚ್ಚಿನ ಒತ್ತು: ಕ್ಯಾಪ್ಟನ್ –ಕಹಳೆ ನ್ಯೂಸ್

ಸಮಗ್ರ ದಕ್ಷಿಣ ಕನ್ನಡ ಅಭಿವೃದ್ಧಿ ನನ್ನ ಬಹುದೊಡ್ಡ ಕನಸಾಗಿದ್ದು, ನಮ್ಮ ಯುವಕರಿಗೆ ಉದ್ಯೋಗ, ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಬೇಕಾದ ಎಲ್ಲ ರೀತಿಯ ವೇದಿಕೆ ನಿರ್ಮಾಣ ಮಾಡಲು ನಾನು ಕಟಿಬದ್ಧನಾಗಿದ್ದೇನೆಂದು ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.     ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ, ಮುಲ್ಕಿ, ಮೂಡಬಿದರೆ ಮಂಡಲದ ತಮ್ಮ ಪ್ರವಾಸದ ನಾಲ್ಕನೇ ದಿನವನ್ನು ಪೊರ್ಕೋಡಿ ಶ್ರೀ ಸೋಮನಾಥೇಶ್ವರನ ಆಶೀರ್ವಾದದೊಂದಿಗೆ ಆರಂಭಿಸಿದ ಚೌಟ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಮೂಡುಬಿದಿರೆಯಲ್ಲಿ ಮತದಾನ ಜಾಗೃತಿ ಜಾಥಾ – ಕಹಳೆ ನ್ಯೂಸ್

ಮೂಡುಬಿದಿರೆ : ಏಪ್ರಿಲ್ 24, 2024ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಮೂಡುಬಿದಿರೆ ತಾಲೂಕು ಪಂಚಾಯತ್ ಗೆ ಮತದಾನ ಜಾಗೃತಿ ಜಾಥಾ ರಥವು ಆಗಮಿಸಿತು. ಜಾಗೃತಿ ರಥವನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಸ್. ವೆಂಕಟಚಲಪತಿ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಸ್ಥಳೀಯ ಶಾಲೆಯ ಮುಖ್ಯೋಪಾಧ್ಯರು, ಶಿಕ್ಷಕರು ಹಾಜರಿದ್ದರು. ಬಳಿಕ ಮೂಡುಬಿದಿರೆ ತಾಲೂಕು ವ್ಯಾಪ್ತಿಯಲ್ಲಿ ಮತದಾನ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಎಸ್. ವೆಂಕಟಚಲಪತಿ – ಕಹಳೆ ನ್ಯೂಸ್

ಮೂಡುಬಿದಿರೆ ತಾಲೂಕಿನಲ್ಲಿ ಮಾದರಿ ಮತಗಟ್ಟೆಗೆ ಆಯ್ಕೆಯಾದ ಗ್ರಾಮ ಪಂಚಾಯತ್ ಸೇರಿದಂತೆ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯ ಮತಗಟ್ಟೆಗಳಿಗೆ ನೂತನ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಸ್. ವೆಂಕಟಚಲಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಖೀ ಎಂಬ ವಿಷಯಕ್ಕೆ ಆಯ್ಕೆಯಾದ ಮಾದರಿ ಮತಗಟ್ಟೆಗಳಿಗೆ ಅಲಂಕಾರವನ್ನು ಮಾಡಿ, ಸ್ವಸಹಾಯ ಗುಂಪಿನ ಮಹಿಳೆಯರಿಂದ ರಂಗೋಲಿಗಳನ್ನು ಬಿಡಿಸಿ, ಮತಗಟ್ಟೆಯನ್ನು ಅಕರ್ಷಕಗೊಳಿಸುವಂತೆ ಹಾಗೂ ಮತಗಟ್ಟೆಗೆ ಸಂಬಂಧಿಸಿದ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿರುವ ಮೂಲಭೂತ ಸೌಕರ್ಯಗಳಾದ ನೀರು, ಶೌಚಾಲಯ,...
1 6 7 8 9 10 25
Page 8 of 25
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ