ಮೂಡುಬಿದಿರೆ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಎಸ್. ವೆಂಕಟಚಲಪತಿ – ಕಹಳೆ ನ್ಯೂಸ್
ಮೂಡುಬಿದಿರೆ ತಾಲೂಕಿನಲ್ಲಿ ಮಾದರಿ ಮತಗಟ್ಟೆಗೆ ಆಯ್ಕೆಯಾದ ಗ್ರಾಮ ಪಂಚಾಯತ್ ಸೇರಿದಂತೆ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯ ಮತಗಟ್ಟೆಗಳಿಗೆ ನೂತನ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಸ್. ವೆಂಕಟಚಲಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಖೀ ಎಂಬ ವಿಷಯಕ್ಕೆ ಆಯ್ಕೆಯಾದ ಮಾದರಿ ಮತಗಟ್ಟೆಗಳಿಗೆ ಅಲಂಕಾರವನ್ನು ಮಾಡಿ, ಸ್ವಸಹಾಯ ಗುಂಪಿನ ಮಹಿಳೆಯರಿಂದ ರಂಗೋಲಿಗಳನ್ನು ಬಿಡಿಸಿ, ಮತಗಟ್ಟೆಯನ್ನು ಅಕರ್ಷಕಗೊಳಿಸುವಂತೆ ಹಾಗೂ ಮತಗಟ್ಟೆಗೆ ಸಂಬಂಧಿಸಿದ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿರುವ ಮೂಲಭೂತ ಸೌಕರ್ಯಗಳಾದ ನೀರು, ಶೌಚಾಲಯ,...