ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಡಾ. ಪ್ರಭಾಕರ ಶಿಶಿಲ ಸರ್ವಾಧ್ಯಕ್ಷರಾಗಿ ಆಯ್ಕೆ -ಕಹಳೆ ನ್ಯೂಸ್
ಮಂಗಳೂರು: ಮಂಗಳುರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಫೆಬ್ರವರಿ 21 ಮತ್ತು 22 ರಂದು ನಡೆಯುವ 27ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಿರಿಯ ಸಾಹಿತಿ ಡಾ. ಪ್ರಭಾಕರ ಶಿಶಿಲ ಅವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ಪ್ರಕಟಿಸಿದ್ದಾರೆ. ಡಾ. ಪ್ರಭಾಕರ ಶಿಶಿಲ ಕುರಿತು: ಸುಳ್ಯ ತಾಲೂಕಿನ ಕೂತುಕುಂಜ ಕಜೆ ಎಂಬಲ್ಲಿ ಹುಟ್ಟಿ ಬೆಳ್ತಂಗಡಿ ತಾಲೂಕಿನ...