Sunday, January 19, 2025

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಹಾಗೂ ಭಟ್ ಬಯೋಟೆಕ್ ಬೆಂಗಳೂರು, ನವಚೇತನ ಹಿರಿಯ ನಾಗರಿಕರ ಬಡಾವಣೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಗೃಹೋದ್ಯಮ ಯಂತ್ರ ಹಸ್ತಾಂತರ – ಕಹಳೆ ನ್ಯೂಸ್

ಪುತ್ತೂರು  : ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಹಾಗೂ ಭಟ್ ಬಯೋಟೆಕ್ ಬೆಂಗಳೂರು, ನವಚೇತನ ಹಿರಿಯ ನಾಗರಿಕರ ಬಡಾವಣೆ ಇವರ ಸಂಯುಕ್ತ ಆಶ್ರಯದಲ್ಲಿ ಪುತ್ತೂರಿನ ಕಲ್ಲರ್ಪೆ ನಿವಾಸಿ ಶ್ರೀಯುತ ರಾಮಪ್ರಸಾದ ಜಿ ಕೆ ಇವರಿಗೆ ಸುಮಾರು 1 ಲಕ್ಷ ಮೊತ್ತದ ದೀಪದ ಬತ್ತಿ ತಯಾರಿಸುವ ಸ್ವಯಂ ಚಾಲಿತ ಯಂತ್ರವನ್ನು ಉಚಿತವಾಗಿ ಹಸ್ತಾಂತರಿಸಲಾಯಿತು. ಶ್ರೀಯುತ ರಾಮಪ್ರಸಾದ ಜಿ ಕೆ ಇವರ ಅನಿರೀಕ್ಷಿತ ಅನಾರೋಗ್ಯದ ಕಾರಣದಿಂದಾಗಿ ದೈನಂದಿನ ಜೀವನ ನಡೆಸಲು ಕಷ್ಟಕರ ಪರಿಸ್ಥಿತಿ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸಂತಾಪಸುದ್ದಿ

ತೀವ್ರ ಅನಾರೋಗ್ಯದಿಂದ ಹಿರಿಯ ಸಾಹಿತಿ ನಾ.ಡಿಸೋಜ ವಿಧಿವಶ : ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸದ ಸರ್ಕಾರ- ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ನೋರ್ಬೆರ್ಟ್ ಡಿಸೋಜ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. 88 ವರ್ಷದ ಡಿಸೋಜ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ 7.50ಕ್ಕೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನೂ ಅವರ ನಿಧನದ ಗೌರವಾರ್ಥ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ರಾಜಕೀಯ ವ್ಯಕ್ತಿಗಳು ನಿಧನ ಹೊಂದಿದಾಗ ರಜೆ ಘೋಷಿಸುವ ಸರ್ಕಾರಗಳು, ಇಂತಹ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪ್ರಾಥಮಿಕ ಶಾಲೆಗಳು ಶಿಸ್ತನ್ನು ಕಲಿಸುವ ಮೂಲಕ ಮಕ್ಕಳಲ್ಲಿ ಸಾಧನೆ ದಾರಿಯನ್ನು ತೋರಿಸುತ್ತದೆ-ಸುತೇಶ್ ಕೆ ಪಿ -ಕಹಳೆ ನ್ಯೂಸ್

ಬಂಟ್ವಾಳ : ಪ್ರಾಥಮಿಕ ಶಾಲೆಗಳು ಶಿಸ್ತನ್ನು ಕಲಿಸುವ ಮೂಲಕ ಮಕ್ಕಳಲ್ಲಿ ಸಾಧನೆ ದಾರಿಯನ್ನು ತೋರಿಸುತ್ತದೆ.ಜೀವನದಲ್ಲಿ ಶಿಸ್ತು ಮುಖ್ಯವಾಗಿದೆ ಶಿಸ್ತಿನಿಂದಲೇ ಸಾಧನೆ ಸಾಧ್ಯ, ಪೋಷಕರು ಖಾಸಗಿ ಶಾಲೆಗಳಿಗೆ ತೋರುವ ಆಸಕ್ತಿಯನ್ನು ಸರಕಾರಿ ಶಾಲೆಗಳಿಗೂ ತೋರಿಸಬೇಕು. ಇಂದಿನ ದಿನಗಳಲ್ಲಿ ಸರಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಾ ಬೆಳೆಯುತ್ತಿದೆ. ಸರಕಾರಿ ಶಾಲೆಯನ್ನು ಕೀಳಾಗಿ ಕಾಣದೆ ಬದಲು ಹೆಮ್ಮೆ ಪಡುವಂತಾಗಬೇಕು ಎಂದು ಬಂಟ್ವಾಳ ಸಂಚಾರಿ ಠಾಣ ಪೊಲೀಸ್ ಉಪ ನಿರೀಕ್ಷಕರಾದ ಸುತೇಶ್ ಕೆ ಪಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದ ಪೋಷಕರ ಸಭೆ-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಪರೀಕ್ಷಾ ಸಮಯ ಸಮೀಪಿಸುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಗೊಂದಲಗಳನ್ನು ಪರಿಹರಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ನಡೆಸಲಾದ ಈ ಸಭೆಯಲ್ಲಿ ಮುಖ್ಯವಾಗಿ ಮುಂಬರುವ ಪೂರ್ವಸಿದ್ಧತಾ ಪರೀಕ್ಷೆಗಳು, ಹಾಗೂ ವಾರ್ಷಿಕ ಪರೀಕ್ಷೆಗಳ ವೇಳಾಪಟ್ಟಿ ಹಾಗೂ ನಿಯಮಾವಳಿಗಳು, ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ಮಾಹಿತಿಗಳನ್ನು ಪೋಷಕರಿಗೆ ನೀಡಲಾಯಿತು. ಸಂಖ್ಯಾಶಾಸ್ತ್ರ ವಿಭಾಗದ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್‌ ರೈಲಿನ ಸಮಯ ಬದಲಾವಣೆ : ರೈಲ್ವೇ ಮಂಡಳಿಯ ಪ್ರಸ್ತಾವನೆಗೆ ಅಸಮ್ಮತಿ ಸೂಚಿಸಿದ ನೈಋತ್ಯ ರೈಲ್ವೇ ಮಂಡಳಿ-ಕಹಳೆ ನ್ಯೂಸ್

ಮಂಗಳೂರು: ಬೆಂಗಳೂರು -ಮೈಸೂರು – ಮಂಗಳೂರು ಸೆಂಟ್ರಲ್‌- ಮುರುಡೇಶ್ವರ ನಡುವೆ ಸಂಚರಿಸುತ್ತಿರುವ ಬೆಂಗಳೂರು – ಮುರುಡೇಶ್ವರ ಎಕ್ಸ್‌ಪ್ರೆಸ್‌ ರೈಲಿನ ಸಮಯ ಬದಲಾಯಿಸುವಂತೆ ರೈಲ್ವೇ ಮಂಡಳಿಯ ಪ್ರಸ್ತಾವನೆಗೆ ನೈಋತ್ಯ ರೈಲ್ವೇ ಮಂಡಳಿ ಅಸಮ್ಮತಿ ಸೂಚಿಸಿದೆ ಎಂದು ನೈರುತ್ಯ ರೈಲ್ವೇಯ ಅಧಿಕೃತ ಮೂಲಗಳು ತಿಳಿಸಿವೆ. ನಂ.16585/86 ರೈಲು ರಾತ್ರಿ 7.45ಕ್ಕೆ ಬೆಂಗಳೂರಿನಿಂದ ಹೊರಟು ಮರುದಿನ ಮಧ್ಯಾಹ್ನ 12.50ಕ್ಕೆ ಮುರುಡೇಶ್ವರ ತಲುಪುತ್ತಿದ್ದು,ಮಧ್ಯಾಹ್ನ 2.10ಕ್ಕೆ ಮುರುಡೇಶ್ವರ ದಿಂದ ಹೊರಟು ಮರುದಿನ ಬೆಳಗ್ಗೆ 7.15ಕ್ಕೆ ಮತ್ತೆ ಬೆಂಗಳೂರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಎಂಟು ತಿಂಗಳ ಹಿಂದಷ್ಟೇ ಖರೀದಿಸಿದ ಸ್ವಿಫ್ಟ್ ಡಿಸೈರ್ ಕಾರಿಗೆ ಬೆಂಕಿ -ಕಹಳೆನ್ಯೂಸ್

ಮಂಗಳೂರು: ನಗರದ ಲೇಡಿಹಿಲ್‌ನಲ್ಲಿ ಸ್ವಿಫ್ಟ್ ಡಿಸೈರ್ (ಸಿಎನ್‌ಜಿ) ಕಾರಿಗೆ ಶನಿವಾರ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು. ಮಣ್ಣಗುಡ್ಡೆಯಿAದ ಲೇಡಿಹಿಲ್ ಕಡೆಗೆ ಬರುತ್ತಿದ್ದ ಕಾರಿನ ಬಾನೆಟ್‌ನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ತಕ್ಷಣವೇ ಚಾಲಕ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಕಾರಿನಲ್ಲಿದ್ದವರು ಕೆಳಕ್ಕಿಳಿದಿದ್ದರು. ಕೆಲವೇ ಕ್ಷಣಗಳಲ್ಲಿ ಬೆಂಕಿ ಕಾರನ್ನು ಆವರಿಸಿಕೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 'ಕಾರಿಗೆ ಬೆಂಕಿ ಹೊತ್ತಿಕೊಂಡ ಮಾಹಿತಿ ಬಂದ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸಿದ್ದೇವೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಸಂಸದ ಕ್ಯಾ. ಚೌಟ ; ಸೈನಿಕ ಶಾಲೆ ಸೇರಿ ದಕ್ಷಿಣ ಕನ್ನಡಕ್ಕೆ ಹೆಚ್ಚಿನ ರಕ್ಷಣಾ ಮೂಲಸೌಕರ್ಯ ನೀಡಲು ಮನವಿ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಂಗಳೂರಿನಲ್ಲಿ ಸೈನಿಕ ಶಾಲೆ ಹಾಗೂ ಮಿಲಿಟರಿ ನೆಲೆ ಸ್ಥಾಪಿಸುವುದು ಸೇರಿದಂತೆ ಜಿಲ್ಲೆಗೆ ಸಂಬAಧಿಸಿದ ಪ್ರಮುಖ ರಕ್ಷಣಾ ಮೂಲಸೌಕರ್ಯ ಒದಗಿಸುವ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಸಲ್ಲಿಕೆ ಮಾಡಿದ್ದಾರೆ. ಮಂಗಳೂರಿನಲ್ಲಿ ಸೈನಿಕ ಶಾಲೆಯನ್ನು ಆರಂಭಿಸುವುದರ ಜತೆಗೆ ಈ ಭಾಗದಲ್ಲಿ ಮಿಲಿಟರಿ ಬೇಸ್‌ನ್ನು ಸ್ಥಾಪಿಸುವುದರಿಂದ ಯುವಜನತೆಯನ್ನು ದೇಶ ಸೇವೆಯತ್ತ ಪ್ರೇರೇಪಿಸುವುದಕ್ಕೆ ಅನುಕೂಲವಾಗುತ್ತದೆ. ದಕ್ಷಿಣ...
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಪವಿತ್ರ ನೇತ್ರಾವತಿ ನದಿಯ ಉಪನದಿ ಮೃತ್ಯುಂಜಯ ಹೊಳೆಗೆ ಗೋಮಾಂಸ ತ್ಯಾಜ್ಯ ಎಸೆದ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.!– ಕಹಳೆ ನ್ಯೂಸ್

ಮಂಗಳೂರು : ಧರ್ಮಸ್ಥಳದ ಪವಿತ್ರ ನೇತ್ರಾವತಿ ನದಿಯ ಉಪನದಿ ಮೃತ್ಯುಂಜಯ ಹೊಳೆಗೆ ದುಷ್ಕರ್ಮಿಗಳು ಗೋ ಮಾಂಸ ತ್ಯಾಜಗಳನ್ನು ತಂದು ಎಸೆದಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ್ಯುಂಜಯ ಹೊಳೆಗೆ ಗೋಮಾಂಸದ ತ್ಯಾಜ್ಯ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯ ಪೊಲೀಸರು ಇದೀಗ ಮೊಹಮ್ಮದ್ ಇರ್ಷಾದ್ (28) ಹಾಗೂ ಮೊಹಮ್ಮದ್ ಅಜ್ಮಲ್ (30) ಬಂಧಿಸಿದ್ದಾರೆ. ಗೋಹತ್ಯೆಯ ಬಳಿಕ ಗೋ ತ್ಯಾಜ್ಯಗಳನ್ನು ಮೂಟೆಗಳಲ್ಲಿ ತಂದು ಮೃತ್ಯುಂಜಯ ಹೊಳೆಗೆ ಎಸೆಯಲಾಗಿದ್ದು,...
1 10 11 12 13 14 644
Page 12 of 644