ಮೂಡುಬಿದಿರೆ ಒಂಟಿಕಟ್ಟೆಯಲ್ಲಿ ನಡೆದ ಕಂಬಳ ಸಮಿತಿ ಸಭೆ : ಕಂಬಳದ ಗಂತಿನಲ್ಲಿ ಕೋಣಗಳನ್ನು ಬಿಡುವುದು ವಿಳಂಬವಾದರೆ ನಿಷೇಧಕ್ಕೆ ನಿರ್ಧಾರ – ಕಹಳೆ ನ್ಯೂಸ್
ಮೂಡುಬಿದಿರೆ : ಕಂಬಳದ ಗಂತಿನಲ್ಲಿ ಕೋಣಗಳನ್ನು ಬಿಡುವವರು ವಿಳಂಬ ಮಾಡಿದ್ದು ಸಾಬೀತಾದರೆ 2 ಕಂಬಳಗಳಿಗೆ ನಿಷೇಧ ಹೇರಲು ಜಿಲ್ಲಾ ಕಂಬಳ ಸಮಿತಿ ತೀರ್ಮಾನಿಸಿದೆ ಎಂದು ಒಂಟಿಕಟ್ಟೆಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಂಬಳಗಳು ವಿಳಂಬವಾಗುತ್ತಿರುವುದರ ಬಗ್ಗೆ ಕಂಬಳ ಅಭಿಮಾನಿಗಳು ಮತ್ತು ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗುತ್ತಿರುವ ಕುರಿತು ಬೇಸರ ವ್ಯಕ್ತಪಡಿಸಲಾಯಿತು. ಕೋಣಗಳಿಗೆ ಅನಗತ್ಯವಾಗಿ ಹೊಡೆಯುವುದನ್ನು...