ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯದಲ್ಲಿ ಶುದ್ಧ ಜಲ ಅಭಿಯಾನ -ಕಹಳೆ ನ್ಯೂಸ್
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯದಲ್ಲಿ ಈ ತಿಂಗಳು ಶುದ್ಧ ಜಲ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸುಮಾರು 1.50 ಲಕ್ಷ ಜನರಿಗೆ ಶುದ್ಧಜಲ ಬಳಕೆ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್ ತಿಳಿಸಿದ್ದಾರೆ. ಜನರಿಗೆ ಶುದ್ಧ ನೀರು ಕೊಡುವ ಉದ್ದೇಶಕ್ಕಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಕರ್ನಾಟಕದಲ್ಲಿ ಸಮುದಾಯ ಶುದ್ಧಕುಡಿಯುವ ನೀರಿನ ಘಟಕ ಸ್ಥಾಪಿಸುವ ನಿರ್ಧಾರ ಕೈಗೊಂಡರು. 2009ರಲ್ಲಿ ಚಿಕ್ಕಮಗಳೂರು...