ಕ್ಯಾ. ಬ್ರಿಜೇಶ್ ಚೌಟ ಸಂಸದರಾದ ಬಳಿಕ ಎಂಪಿ ಲಾಡ್ಸ್ ಅನುದಾನದಡಿ ಮೊದಲ ಕಾಮಗಾರಿಗೆ ಚಾಲನೆ-ಕಹಳೆ ನ್ಯೂಸ್
ಮಂಗಳೂರು: ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸೋಮವಾರ ಚಾಲನೆ ನೀಡಿದ್ದಾರೆ. ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಅಂದಾಜು 5 ಲಕ್ಷ ರೂ. ವೆಚ್ಚದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಕಸಬಾ ಪರ್ಲಡ್ಕ ಸರ್ಕಾರಿ ಕಾಂಪೌಂಡ್ ಒಳಗಿರುವ ತೋಡಿಗೆ ಚರಂಡಿ ವ್ಯವಸ್ಥೆ ಹಾಗೂ ಸ್ಲ್ಯಾಬ್ ನಿರ್ಮಾಣ ಕಾರ್ಯ ನಡೆಯಲಿದ್ದು, ಸಂಸದ ಕ್ಯಾ. ಚೌಟ ಅವರು ಸೋಮವಾರ ಜ. 13...