ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ತಂಗಡಿಯ ಪುತ್ತಿಲದ ವ್ಯಕ್ತಿ ಮೃತ್ಯು ; ಕೊರೋನಾ ಸೋಂಕು ದೃಢ – ಕಹಳೆ ನ್ಯೂಸ್
ಪುತ್ತೂರು: ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ತಂಗಡಿ ತಾಲೂಕಿನ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಜು. 17ರಂದು ಮೃತಪಟ್ಟಿದ್ದು, ಮೃತಪಟ್ಟ ವ್ಯಕ್ತಿಯ ಕೊರೋನಾ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಜು.14ರಂದು ಬೆಳ್ತಂಗಡಿ ತಾಲೂಕಿನ ಪುತ್ತಿಲದ ಸುಮಾರು 57 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಜು. 16ರಂದು ಅವರ ಗಂಟಲು ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿತ್ತು. 17ರಂದು ಆ ವ್ಯಕ್ತಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ವ್ಯಕ್ತಿ...