Sunday, January 19, 2025

ಪ್ರಾದೇಶಿಕ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಚಾರ್ಮಾಡಿ ಘಾಟ್ ಬಂದ್! – ಕಹಳೆ ನ್ಯೂಸ್

ಬೆಳ್ತಂಗಡಿ: ಚಿಕ್ಕಮಗಳೂರು-ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆಯಿಂದಾಗಿ ಮಣ್ಣು ಕುಸಿಯುವ ಭೀತಿ ಎದುರಾಗಿದ್ದು ಇದನ್ನು ತಪ್ಪಿಸಲು ಘಾಟ್ ನಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಗೌತಮ್ ಬಗಾದಿ ತಿಳಿಸಿದ್ದಾರೆ. ಕಳೆದ ವರ್ಷದ ಮಳೆಗಾಲದಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ರಸ್ತೆಯೇ ಮಾಯವಾಗಿತ್ತು. ಕಳೆದೊಂದು ವಾರದಿಂದ ಚಿಕ್ಕಮಗಳೂರು, ಕೊಟ್ಟಿಗೆಹಾರ, ಮೂಡಿಗೆರೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಮಣ್ಣು...
ದಕ್ಷಿಣ ಕನ್ನಡಸುಳ್ಯ

ಸುಳ್ಯ ಸರಕಾರಿ ಆಸ್ಪತ್ರೆ ವೈದ್ಯರು, ನರ್ಸ್ ಗಳ ಸಹಿತ 6 ಮಂದಿಗೆ ಕೊರೊನಾ ಪಾಸಿಟಿವ್ ; ಆತಂಕದಲ್ಲಿ ಜನತೆ – ಕಹಳೆ ನ್ಯೂಸ್

ಸುಳ್ಯ: ಇಲ್ಲಿನ ಸರಕಾರಿ ಆಸ್ಪತ್ರೆಯ ವೈದ್ಯರು, ನರ್ಸ್ ಗಳು ಸೇರಿ ಒಟ್ಟು ಆರು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೆಲ ದಿನಗಳ ಹಿಂದೆ ಆಸ್ಪತ್ರೆಯಲ್ಲಿ ದಾಖಲಾದ ವ್ಯಕ್ತಿಯೊಬ್ಬರಿಗೆ ಕೊರೊನಾ ಬಂದಿತ್ತು. ಬಳಿಕ ಅವರು ಮಂಗಳೂರಿಗೆ ಹೋಗಿದ್ದರು. ಆ ವ್ಯಕ್ತಿಗೆ ಚಿಕಿತ್ಸೆ ‌ನೀಡಿದ್ದ ನರ್ಸ್ ಗೆ ಕೂಡಾ ಕೊರೊನಾ ದೃಢವಾಗಿತ್ತು. ಸರಕಾರಿ ಆಸ್ಪತ್ರೆಯ ಒಬ್ಬರು ವೈದ್ಯಾಧಿಕಾರಿ, ಮೂವರು ನರ್ಸ್ ಹಾಗೂ ಇಬ್ಬರು ಡಯಾಲಿಸಿಸ್ ವಿಭಾಗದ ತಂತ್ರಜ್ಞರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಾಳೆ ಉಪ್ಪಿನಂಗಡಿ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ ; ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್‌ರಿಂದ ಪದಪ್ರಧಾನ – ಕಹಳೆ ನ್ಯೂಸ್

ಉಪ್ಪಿನಂಗಡಿ: ರೋಟರಿ ಕ್ಲಬ್ ಉಪ್ಪಿನಂಗಡಿ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 10ರಂದು ಉಪ್ಪಿನಂಗಡಿ ರೋಟರಿ ಸಮುದಾಯ ಭವನದಲ್ಲಿ ಜರಗಲಿದೆ ಎಂದು ಉಪ್ಪಿನಂಗಡಿ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ರವೀಂದ್ರ ದರ್ಭೆ ತಿಳಿಸಿದರು. ಅವರು ಉಪ್ಪಿನಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಮಾತನಾಡಿ, ರೋಟರಿ ವಲಯ-4ರ ಸಹಾಯಕ ಗವರ್ನರ್ ಹಾಗೂ ವಿಧಾನ ಪರಿಷತ್ ಸದಸ್ಯ  ಪ್ರತಾಪಸಿಂಹ ನಾಯಕ್ ಪದಪ್ರಧಾನ ಮಾಡಲಿದ್ದಾರೆ. ರೋಟರಿ ವಲಯ ಸೇನಾನಿ ಜೆರೋಮಿಯಸ್ ಪಾಯಸ್, ಮಾತೃ ಘಟಕವಾದ ಪುತ್ತೂರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರು

ಪುತ್ತೂರು ಮೂಲದ 32 ವರ್ಷದ ಮಹಿಳೆ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮೂರು ಮಂದಿ ಬಲಿ ; ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 29ಕ್ಕೆ ಏರಿಕೆ – ಕಹಳೆ ನ್ಯೂಸ್

ಮಂಗಳೂರು, ಜು 08 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.08 ರ ಬುಧವಾರ ಕೊರೊನಾದಿಂದ ಮೂವರು ಮೃತಪಟ್ಟಿದ್ದು ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಪುತ್ತೂರು ಮೂಲದ 32 ವರ್ಷದ ಮಹಿಳೆ, ಉಳ್ಳಾಲ ನಿವಾಸಿಯಾಗಿದ್ದ 62 ವರ್ಷದ ವೃದ್ದೆ, ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದು ಈ ಪೈಕಿ ಇಬ್ಬರು ಮಹಿಳೆಯರು ನಗರದ ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಿಲ್ಲೆಯಲ್ಲಿ ಕೊರೊನಾ...
ದಕ್ಷಿಣ ಕನ್ನಡಮೂಡಬಿದಿರೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ ; ಮೂಡಬಿದ್ರೆಯ 53 ವರ್ಷ ಪ್ರಾಯದ ವ್ಯಕ್ತಿ ಸಾವು – ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 26 ಕ್ಕೆ ಏರಿಕೆ – ಕಹಳೆ ನ್ಯೂಸ್

ಮಂಗಳೂರು, ಜು. 07 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಕ ಕೊರೊನಾ ವೈರಸ್‌ ಮತ್ತೊಂದು ಬಲಿ ಪಡೆದಿದ್ದು ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಮೂಡಬಿದ್ರೆಯ 53 ವರ್ಷ ಪ್ರಾಯದ ವ್ಯಕ್ತಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಸೋಮವಾರ ಒಂದು ದಿನದಲ್ಲಿ ಮೂವರು ಕೊರೊನಾಗೆ ಬಲಿಯಾಗಿ ಸಾವಿನ ಸಂಖ್ಯೆ 25 ಕ್ಕೆ ಏರಿಕೆಯಾಗಿತ್ತು. ಇದೀಗ ಮಂಗಳವಾರ ಕೊರೊನಾಕ್ಕೆ ಮತ್ತೊಂದು ಬಲಿಯಾಗಿದ್ದು ಈವರೆಗೆ ಜಿಲ್ಲೆಯಲ್ಲಿ...
ಪುತ್ತೂರುಸುದ್ದಿ

ಪಿಎಂ ಕೇರ್ ನಿಧಿಗೆ 2 ಲಕ್ಷ ರೂಪಾಯಿ ನೀಡಿದ ಪುತ್ತೂರಿನ ಹಿರಿಯ ವೈದ್ಯೆ ಡಾ.ಗೌರಿ ಪೈ -ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಹಿರಿಯ ವೈದ್ಯೆ ಡಾ. ಗೌರಿ ಪೈಯವರು ವಿಧಾನಪರಿಷತ್ ಸದಸ್ಯರಾದ ಶ್ರೀ ಪ್ರತಾಪಸಿಂಹ ನಾಯಕ್ ಅವರ ಮುಖಾಂತರ ಪ್ರಧಾನಿಯವರ ಪಿಎಂ ಕೇರ್ ನಿಧಿಗೆ 2 ಲಕ್ಷ ರೂಪಾಯಿಗಳನ್ನು ಚೆಕ್ ಮುಖಾಂತರ ದೇಣಿಗೆ ನೀಡಿದರು....
ಕಾಸರಗೋಡುಮಂಜೇಶ್ವರಸುದ್ದಿ

ಕುಂಬಳೆಯಲ್ಲಿ ಕಾಮಗಾರಿ ನಡೆಯುತ್ತಿದ್ದ ಮನೆಯಲ್ಲಿತ್ತು 4 ಕೆ.ಜಿ ಗಾಂಜಾ ; ಆರೋಪಿ ಮುಹಮ್ಮದ್ ಬಾತಿಷಾ ಅಂದರ್ – ಕಹಳೆ ನ್ಯೂಸ್

ಕುಂಬಳೆ, ಜು 06 : ನಾಲ್ಕು ಕಿಲೋ ಗಾಂಜಾ ಸಹಿತ ಓರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ . ಬಂಧಿತನನ್ನು ಬಂದ್ಯೋಡು ಅಡ್ಕದ ಬಾಡಿಗೆ ಕಟ್ಟಡದಲ್ಲಿ ವಾಸವಾಗಿರುವ ಕುಕ್ಕಾರು ಮೂಲದ ಮುಹಮ್ಮದ್ ಬಾತಿಷಾ (36) ಎಂದು ಗುರುತಿಸಲಾಗಿದೆ . ಈತ ಕಾಮಗಾರಿ ನಡೆಯುತ್ತಿದ್ದ ಮನೆಯೊಳಗೆ 4 ಕೆ.ಜಿ ಗಾಂಜಾವನ್ನು ಬಚ್ಚಿಟ್ಟಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದು ಕಾರ್ಯಾಚರಣೆ ವೇಳೆ ಬಚ್ಚಿಡಲಾಗಿದ್ದ 4 ಕೆ. ಜಿ ಗಾಂಜಾವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ....
ಬೆಳ್ತಂಗಡಿಸುದ್ದಿ

ಬೆಳ್ತಂಗಡಿಯಲ್ಲಿ ಬೈಕ್‌ಗಳ ಕಳವು ಪ್ರಕರಣ ; ಐವರು ಆರೋಪಿಗಳ ಹೆಡೆಮುರಿಕಟ್ಟಿದ ಎಸ್.ಐ. ನಂದಕುಮಾರ್ – ಕಹಳೆ ನ್ಯೂಸ್

ಬೆಳ್ತಂಗಡಿ, ಜು. 05 : ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆಯುತ್ತಿದ್ದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಯವರು ಐವರು ಆರೋಪಿಗಳನ್ನು ವಶಕ್ಕೆ ಪಡೆದು ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.     ಬಂಧಿತ ಆರೋಪಿಗಳನ್ನು ಸುರತ್ಕಲ್‌ನ ವಿಜಯ ಯಾನೆ ಆಂಜನೇಯ (23), ಉಳಾಯಿಬೆಟ್ಟು ನಿವಾಸಿ ಪ್ರದೀಪ್ ಯಾನೆ ಚೇತನ್ ಯಾನೆ ಪ್ರದಿ ( 27), ಬಂಟ್ವಾಳದ...
1 636 637 638 639 640 643
Page 638 of 643