ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಪೋಷಕರ ಸಭೆ; ವಿದ್ಯಾರ್ಥಿಗಳು ದೇಶದ ಸಾಂಸ್ಕೃತಿಕ ರಾಯಭಾರಿಗಳಾಗಬೇಕು : ಸುಬ್ರಹ್ಮಣ್ಯ ನಟ್ಟೋಜ-ಕಹಳೆ ನ್ಯೂಸ್
ಪುತ್ತೂರು: ನಗರದ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪದವಿ ಪೂರ್ವ ವಿದ್ಯಾಲಯದಲ್ಲಿ ಭಾನುವಾರ ರಕ್ಷಕ ಶಿಕ್ಷಕ ಸಂಘದ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ವಸತಿ ನಿಲಯದಲ್ಲಿರುವ ಮಕ್ಕಳು ಶೈಕ್ಷಣಿಕ ಕ್ಷೇತ್ರದಲ್ಲಿ ಮಾತ್ರ ಮುಂಚೂಣಿಯಲ್ಲಿರದೆ ದೇಶದ ಸಂಸ್ಕೃತಿಯನ್ನು ಬಿಂಬಿಸುವ ರಾಯಬಾರಿಗಳಾಗಬೇಕು. ಮುಂದಿನ ದಿನಗಳಲ್ಲಿ ಪಠ್ಯ ವಿಷಯಗಳು ಮಾತ್ರವಲ್ಲದೆ ಧಾರ್ಮಿಕ ವಿಷಯಗಳನ್ನು ಬೋಧಿಸುವ, ನಮ್ಮ ಸಂಸ್ಕೃತಿ ಸಂಸ್ಕಾರಗಳನ್ನು ಮಕ್ಕಳಿಗೆ ತಿಳಿಸುವ...