ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಗ್ರಂಥಾಲಯ ಸಪ್ತಾಹ ಮತ್ತು ಪುಸ್ತಕ ಪ್ರದರ್ಶನ ಉದ್ಘಾಟನೆ-ಕಹಳೆ ನ್ಯೂಸ್
ಪುತ್ತೂರು: (ನವೆಂಬರ್ 14): “ಪುಸ್ತಕಗಳು ಮತ್ತು ಓದು ಜೀವನದ ಅವಿಭಾಜ್ಯ ಅಂಗ. ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿರುವ ಪುಸ್ತಕಗಳನ್ನು ಓದುವ ಅಭ್ಯಾಸವನ್ನು ರೂಢಿಸಿಕೊಳ್ಳುವ ಮೂಲಕ ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ಅದರಲ್ಲೂ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಗೇಮ್ ಗಳಲ್ಲಿ ಕಾಲ ಕಳೆಯುವ ಬದಲಿಗೆ ಉತ್ತಮ ಪುಸ್ತಕಗಳನ್ನು ತಮ್ಮ ಬದುಕಿನ ಒಡನಾಡಿಯನ್ನಾಗಿಸಿಕೊಳ್ಳಬೇಕು” ಎಂದು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಡಾ| ???ಂಟನಿ ಪ್ರಕಾಶ್ ಮೊಂತೇರೊರವರು ಹೇಳಿದರು. ನವಂಬರ್ 14 ರಿಂದ ನವಂಬರ್...