ವಿವೇಕಾನಂದ ಕಾಲೇಜಿನಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಿAದ ಎನ್ವೋಟೆಕ್ ರಾಜ್ಯ ಮಟ್ಟದ ವಿಚಾರ ಸಂಕಿರಣ, ಸ್ಪರ್ಧೆ-ಕಹಳೆ ನ್ಯೂಸ್
ಪುತ್ತೂರು. : ಪ್ರಸ್ತುತ ದಿನಗಳಲ್ಲಿ ಅಭಿವೃದ್ಧಿಯ ಭರಾಟೆಗೆ ಪರಿಸರ ಬಲಿ ಆಗುತ್ತಿರುವುದು ಅತ್ಯಂತ ಖೇದಕರ ಸಂಗತಿ. ಕೇವಲ ತಂತ್ರಜ್ಞಾನದ ಮುಖೇನ ಪರಿಸರದ ಸಮತೋಲನವನ್ನು ಕಾಪಾಡಲು ಸಾಧ್ಯವಿಲ್ಲ. ಬದಲಾಗಿ ಪರಿಸರದ ಮೂಲವನ್ನು ಅಧ್ಯಯನ ಮಾಡಿ ಸಾಂಪ್ರದಾಯಿಕವಾಗಿ ಹಾಗೂ ತಾಂತ್ರಿಕವಾಗಿ ಸುಸ್ಥಿರತೆಯನ್ನು ಕಾಪಾಡಬಹುದು ಎಂದು ಮಣಿಪಾಲದ ಎಂಐಟಿಯ ಜಿಯೋಲಾಜಿ ವಿಭಾಗದ ಮುಖ್ಯಸ್ಥ ಡಾ. ಕೆ. ಬಾಲಕೃಷ್ಣ ನುಡಿದರು. ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ದ...