ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯಲ್ಲಿ ವಾರ್ಷಿಕೋತ್ಸವ ಪ್ರತಿಭಾ ತರಂಗಿಣಿ 2024 : ಮಕ್ಕಳಿಗೆ ಸೋಲು ಸ್ವೀಕರಿಸುವುದನ್ನೂ ಕಲಿಸಿಕೊಡಬೇಕು : ರಾಜ ಬಿ.ಎಸ್- ಕಹಳೆ ನ್ಯೂಸ್
ಪುತ್ತೂರು: ನಾವಿಂದು ಮಕ್ಕಳಿಗೆ ಗೆಲ್ಲುವುದನ್ನಷ್ಟೇ ಹೇಳಿಕೊಡುತ್ತಿದ್ದೇವೆ. ಹಾಗಾಗಿ ಸೋಲನ್ನು ಒಪ್ಪಿಕೊಳ್ಳುವುದು, ಅದರಿಂದ ಸ್ಪೂರ್ತಿ ಪಡೆಯುವ ಕಲೆ ಮಕ್ಕಳಿಗೆ ಕರಗತವಾಗುತ್ತಿಲ್ಲ. ಆದ್ದರಿಂದ ಸೋಲುವುದನ್ನೂ ನಮ್ಮ ಮಕ್ಕಳಿಗೆ ಕಲಿಸಿಕೊಡಬೇಕಾದ ಅನಿವಾರ್ಯತೆ ಇದೆ ಎಂದು ಮಂಗಳೂರಿನ ಕರ್ನಾಟಕ ಬ್ಯಾಂಕ್‍ನ ಜನರಲ್ ಮ್ಯಾನೇಜರ್ ರಾಜ ಬಿ.ಎಸ್. ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ವಾರ್ಷಿಕೋತ್ಸವ – ಪ್ರತಿಭಾ ತರಂಗಿಣಿ 2024 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೆಲವು...