ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ-ಕಹಳೆ ನ್ಯೂಸ್
ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಮತ್ತು ಪ್ರಸಾದ್ ನೇತ್ರಾಲಯ, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ 10ದಿನಗಳ ಕಾಲ ಉಚಿತ ನೇತ್ರ ತಪಾಸಣಾ ಶಿಬಿರವು ಕಳೆದ ಜನವರಿ ತಿಂಗಳಿನಲ್ಲಿ ಜರಗಿತ್ತು. ನೇತ್ರ ತಪಾಸಣಾ ಸಂದರ್ಭದಲ್ಲಿ ಕನ್ನಡಕದ ಅವಶ್ಯಕತೆಯನ್ನು ತಿಳಿಸಿರುವವರಿಗೆ ದಿನಾಂಕ 22.10.2020ರಂದು ಶ್ರೀರಾಮ ಪ್ರಾಥಮಿಕ ಶಾಲಾ ವಿಭಾಗದ ವೇದವ್ಯಾಸ ಧ್ಯಾನ ಮಂದಿರದಲ್ಲಿ ಉಚಿತವಾಗಿ ಕನ್ನಡಕವನ್ನು ವಿತರಿಸಲಾಯಿತು. ಪ್ರಸಾದ್ ನೇತ್ರಾಲಯ ಮಂಗಳೂರು ಇದರ ಸಂಸ್ಥಾಪಕರಾದ ಡಾ| ಕೃಷ್ಣಪ್ರಸಾದ್ ಇವರು ಮಾತನಾಡಿ “ನಾವು ಈಗ ಉತ್ತಮ...