ಸಮಚಿತ್ತದಿಂದ ನಿರ್ದಿಷ್ಟ ಗುರಿಯನ್ನು ಮುಟ್ಟಲು ಮಾನವನಿಗೆ ದೈಹಿಕ ಸಾಮರ್ಥ್ಯ ಮುಖ್ಯ; ಶ್ರೀಮತಿ.ಪ್ರೇಮಾ.ಬಿ-ಕಹಳೆ ನ್ಯೂಸ್
ಪುತ್ತೂರು: ಸಮಚಿತ್ತದಿಂದ ನಿರ್ದಿಷ್ಟ ಗುರಿಯನ್ನು ಮುಟ್ಟಲು ಮಾನವನಿಗೆ ದೈಹಿಕ ಸಾಮರ್ಥ್ಯ ಮುಖ್ಯವಾಗಿದೆ. ಈ ದೈಹಿಕ ಸಾಮರ್ಥ್ಯವನ್ನು ಗಳಿಸಿಕೊಳ್ಳಲು ನಿತ್ಯ ಮಿತವಾದ ವ್ಯಾಯಾಮ, ಕ್ರೀಡಾ ಚಟುವಟಿಕೆಗಳು ಅಗತ್ಯ ಎಂದು ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ವಾರ್ಷಿಕ ಕ್ರೀಡಾ ಕೂಟದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಶಿಕ್ಷಣವು ಮಾನವನ ಜೀವನವನ್ನು ರೂಪಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತವೆ. ಅದರಂತೆಯೇ ಕ್ರೀಡೆಗಳೂ...