ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನೂತನ ಲೀಗೋ-ನೆಟ್ ಕಂಪ್ಯೂಟರ್ ಲ್ಯಾಬ್ಲೈ ಬ್ರೆರಿಯ ಉದ್ಘಾಟನೆ-ಕಹಳೆ ನ್ಯೂಸ್
ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಲೀಗೋ-ನೆಟ್ ಕಂಪ್ಯೂಟರ್ ಲ್ಯಾಬ್ ಹಾಗೂ ಇ- ಲೈಬ್ರೆರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಉದ್ಘಾಟನಾ ಕಾರ್ಯಕ್ರಮವನ್ನು ಅಬುದಾಬಿಯ ಭಾರತೀಯ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರಾದ ಮಿತ್ರಂಪಾಡಿ ಜಯರಾಮ್ ರೈಯವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಡಿಜಿಟಲ್ಯು ಗದಲ್ಲಿ ಜಗತ್ತು ಪ್ರತಿಕ್ಷಣ ಬದಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರವು...