Friday, April 18, 2025

ಸುಬ್ರಹ್ಮಣ್ಯ

ಕಡಬದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯ

ರಾಜ್ಯದ ಇತಿಹಾಸ ಪ್ರಸಿದ್ದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 155.95 ಕೋಟಿ ರೂ ಏರಿಕೆ – ಕಹಳೆ ನ್ಯೂಸ್

ಕಡಬ : ರಾಜ್ಯದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಏರಿಕೆಯಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು. ಅಂದರೆ ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಮನೆ ಮೇಲ್ಛಾವಣಿ ಕುಸಿದು ಇಬ್ಬರಿಗೆ ಗಾಯ ಓರ್ವ ಅಪಾಯದಿಂದ ಪಾರು-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಮಣ್ಣಿನ ಗೋಡೆಯ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದು ಮನೆಯಲ್ಲಿದ್ದ ಮೂವರಲ್ಲಿ ಇಬ್ಬರು ಗಾಯಗೊಂಡ, ಓರ್ವರು ಅಪಾಯದಿಂದ ಪಾರಾದ ಘಟನೆ ಮಂಗಳವಾರ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣದಲ್ಲಿ ಸಂಭವಿಸಿದೆ. ನೆಟ್ಟಣದ ಕೃಷ್ಣ ಕುಟ್ಟಿ (65) ಹಾಗೂ ಅವರ ಮಗಳು ಶಾಂತಿ ಕೃಷ್ಣ (35) ಗಾಯಗೊಂಡಿದ್ದು, ಕೃಷ್ಣ ಕುಟ್ಟಿ ಅವರ ಪತ್ನಿ ಅಪಾಯದಿಂದ ಪಾರಾಗಿದ್ದಾರೆ. ಕೃಷ್ಣ ಕುಟ್ಟಿ ಅವರ ಮನೆಯವರು ಮಂಗಳವಾರ ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ...
ದಕ್ಷಿಣ ಕನ್ನಡಪುತ್ತೂರುಮಂಗಳೂರುರಾಜ್ಯಸುದ್ದಿಸುಬ್ರಹ್ಮಣ್ಯ

ಮಂಗಳೂರು – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ; ಸಂಸದ ಕ್ಯಾ.‌ಬ್ರಿಜೇಶ್ ಚೌಟ ಫಾಲೋ ಅಪ್ ಫಲಶ್ರುತಿ – ಕಹಳೆ ನ್ಯೂಸ್

ಮಂಗಳೂರು - ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಸಲಾಗಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾನ್ಯ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರು ಇದೇ ಶನಿವಾರ ಏಪ್ರಿಲ್ 12ನೇ ತಾರೀಖಿನಂದು ನೆರವೇರಿಸಲಿದ್ದಾರೆ.. ಇದು ಸಾಕಾರಗೊಳ್ಳಲು‌ ಸಂಸದ ಕ್ಯಾ.‌ಬ್ರಿಜೇಶ್ ಚೌಟ ರೈಲ್ವೆ ಸಚಿವಾಲಯದೊಂದಿಗೆ ಆದ್ಯತೆಯ ಮೇರೆಗೆ ಫಾಲೋ ಅಪ್ ಮಾಡಿದ ಕಾರಣ, ಈ ಬಹುಕಾಲದಿಂದ ಬಾಕಿ ಉಳಿದಿರುವ ಬೇಡಿಕೆ ಈಡೇರುತ್ತಿದೆ ಎಂದು ಹೇಳಲಾಗುತ್ತಿದೆ. ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಚಲನಚಿತ್ರ ರಂಗದ ಖ್ಯಾತ ನಟ ಪ್ರಭುದೇವ್ ಕುಕ್ಕೆಗೆ ಭೇಟಿ-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಚಲನಚಿತ್ರ ರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಮಾ.15ರ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು. ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ನಂತರ ದೇವಸ್ಥಾನದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿಯನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ...
ಜಿಲ್ಲೆದಕ್ಷಿಣ ಕನ್ನಡಸಿನಿಮಾಸುದ್ದಿಸುಬ್ರಹ್ಮಣ್ಯ

ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಬಾಲಿವುಡ್ ನಟಿ ಕತ್ರಿನಾ ಕೈಫ್ ಮಾ.11ರ ಮಂಗಳವಾರ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇಂದು (ಮಾ.11ರ ಮಂಗಳವಾರ) ಮತ್ತು ನಾಳೆ (ಮಾ.12ರ ಬುಧವಾರ) ಕ್ಷೇತ್ರದಲ್ಲಿ ಇದ್ದುಕೊಂಡು ಸೇವೆಯಲ್ಲಿ ಭಾಗಿಯಾಗಲಿದ್ದಾರೆ. ಸ್ನೇಹಿತರೊಂದಿಗೆ ಕುಕ್ಕೆಗೆ ಆಗಮಿಸಿರುವ ಬಾಲಿವುಡ್ ನ ಖ್ಯಾತ ನಟಿ ಕತ್ರೀನಾ ಕೈಫ್ ಅವರು ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆ ನೆರವೇರಿಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಮಾಸ್ಕ್ ಹಾಕಿ, ತಲೆಗೆ...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಸರಳ ಸಾಮೂಹಿಕ ವಿವಾಹ : ಅರ್ಜಿ ಸಲ್ಲಿಸಲು ಫೆ.20 ಕೊನೆಯ ದಿನಾಂಕ-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದ್ದು, ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ಫೆ.20ರ ಒಳಗೆ ಸಲ್ಲಿಸಬಹುದು ಎಂದು ತಿಳಿಸಲಾಗಿದೆ. ಮಾ.24 ರಂದು ಬೆಳಗ್ಗೆ 11.00 ರಿಂದ 12.00ರ ವರೆಗೆ ನೆರವೇರುವ ವೃಷಭ ಲಗ್ನ ಸುಮುಹೂರ್ತದಲ್ಲಿ ವಿವಾಹ ನೆರವೇರಲಿದ್ದು, ವಧು-ವರರು ನಿಗದಿಪಡಿಸಿದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಫೆ.20 ಕೊನೆಯ ದಿನಾಂಕವಾಗಿದೆ. ಫೆ.24ರಂದು ನೋಂದಾಯಿತ ವಧು-ವರರ ವಿವರಗಳನ್ನು...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ:ನಡುಗಲ್ಲು ಸಮೀಪ ಹಗಲಿನಲ್ಲೇ ಕಾಣಿಸಿಕೊಂಡ ಕಾಡಾನೆ-ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಪ್ರದೇಶದಲ್ಲಿ ಹಗಲಿನಲ್ಲೇ ಕಾಡಾನೆ ಸಂಚರಿಸಿದೆ. ಕಲ್ಲಾಜೆ ಭಾಗದಿಂದ ಅಲ್ಲಿನ ಹೊಳೆಗೆ ಇಳಿದ ಕಾಡಾನೆ ಮರಕತ ದೇವಸ್ಥಾನದ ಮುಂಭಾಗದ ರಸ್ತೆಯ ಮೂಲಕ ಯೇನೆಕಲ್ಲು ಗ್ರಾಮದ ಅರಂಪಾಡಿ ಭಾಗದಲ್ಲಿ ಸಂಚರಿಸಿದೆ. ಬಳಿಕ ರಾತ್ರಿ ವೇಳೆ ಯೇನೆಕಲ್ಲು ಶಾಲಾ ಮೈದಾನದಲ್ಲಿ ಸಾಗುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಬಳಿಕ ಕಾಡಾನೆ ಅರಣ್ಯದತ್ತ ತೆರಳಿದೆ. ಕಾಡಾನೆ ಯಾವುದೇ ಹಾನಿ ಮಾಡಿಲ್ಲ. ಹೊಳೆಯಿಂದ ಮೇಲೆ ರಸ್ತೆಗೆ ಬಂದು ರಸ್ತೆಯಲ್ಲೇ ಸಂಚರಿಸಿದೆ ಎಂದು ಸ್ಥಳೀಯರು...
ಕಡಬದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ರಾಜ್ಯ ಹೊರತುಪಡಿಸಿ ಉಳಿದ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿ ವರದಿ ನೀಡಿಲ್ಲ : ಸಚಿವೆ ಶೋಭಾ ಕರಂದ್ಲಾಜೆ -ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಫಿಸಿಕಲ್ ಸರ್ವೆ ನಡೆಸಿದಾಗ ಮಾತ್ರ ಯಥಾಸ್ಥಿತಿ ತಿಳಿಯಲಿದೆ. ಆದರೆ ಕೇರಳ ರಾಜ್ಯ ಹೊರತುಪಡಿಸಿ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿ ವರದಿ ನೀಡಿಲ್ಲ ಎಂದು ಕೇಂದ್ರ ಅತಿ ಸಣ್ಣ, ಸಣ್ಣ, ಮಾಧ್ಯಮ ಕೈಗಾರಿಕಾ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಕಡಬ ತಾಲೂಕಿನ ಕೇರ್ಪಡದಲ್ಲಿ ಮಾತನಾಡಿದ ಅವರು ಇದು ಹಿಂದಿನವರು ಮಾಡಿರುವ ತಪ್ಪು. ಏರಿಯಲ್ ಸರ್ವೆ...
1 2 3 15
Page 1 of 15
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ