ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ – ನಿರ್ಬಂಧ ಮೀರಿ ಗರ್ಭಗುಡಿಯ ಪೋಟೋ ತೆಗೆದ ಆರೋಪ – ಪೋಲೀಸ್ ಠಾಣೆಯಲ್ಲಿ ದೂರು ದಾಖಲು – ಕಹಳೆ ನ್ಯೂಸ್
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಹಾಗೂ ಗರ್ಭಗುಡಿಯ ಪೋಟೋ ತೆಗೆದ ಆರೋಪದಡಿ ಕುಲ್ಕುಂದದ ಶ್ರೀನಾಥ್ ಭಟ್ ಎಂಬವರ ಮೇಲೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ದೂರು ನೀಡಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವರ್ಗದವರು ಹಾಗೂ ಒಳಾಂಗಣ ನೌಕರರು ದೂರು ನೀಡಿದ್ದಾರೆ. ದೂರಿನಲ್ಲಿ ಶ್ರೀನಾಥ್ ಭಟ್ ಎಂಬವರು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯ ಫೋಟೋ ತೆಗೆಯುಲು ನಿಷೇಧವಿದ್ದರೂ ಗರ್ಭ...