ಸುಳ್ಯ: ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ-ಕಹಳೆ ನ್ಯೂಸ್
ಸುಳ್ಯ: ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಕೊಲೆಗೈದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ನಿವಾಸಿ, ಕೃಷಿಕ ರಾಮಚಂದ್ರ ಗೌಡ ಅಲಿಯಾಸ್ ಚಂದ್ರ (54) ಎಂದು ತಿಳಿದು ಬಂದಿದೆ. ಅವರ ಪತ್ನಿ ವಿನೋದ (43) ಹತ್ಯೆಗೊಳಗಾದವರು ಎಂದು ತಿಳಿದು ಬಂದಿದೆ. ತನ್ನದೇ ಲೈಸನ್ಸ್...