ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ-ಕಹಳೆ ನ್ಯೂಸ್
ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಅಕ್ಟೋಬರ್ 01 ಮಂಗಳವಾರದAದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಮಣಿಪಾಲ ಸಂಶೋದನಾ ಕೇಂದ್ರದಲ್ಲಿ ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ, ಪದವಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ರ್ಯಾಂಕ್ ಪಡೆದಿದ್ದ ಕು. ಪ್ರಮೀತ, ದೀಪ ಬೆಳಗಿದ ನಂತರ ವೈಜ್ಞಾನಿಕವಾಗಿ ರಾಸಾಯನಿಕ ವಸ್ತುಗಳನ್ನು ಬಳಸಿ ಕಾಮನ ಬಿಲ್ಲಿನ ಬಣ್ಣಗಳನ್ನು ಉತ್ಪಾದಿಸಿ ವಿನೂತನ ರೀತಿಯಲ್ಲಿ...