Saturday, April 12, 2025

ಸುಳ್ಯ

ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಮನೆಯಲ್ಲಿ ಯಾರು ಇಲ್ಲದ ವೇಳೆ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ : ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬೆಳ್ಳಾರೆ ನಿವಾಸಿ ಲಕ್ಷ್ಮೀಕಾಂತ ಹೆಗ್ಡೆಯವರ ಪತ್ನಿ ವೀಣಾ ಆತ್ಮಹತ್ಯೆಗೆ ಯತ್ನಿಸಿದವರು. ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದರು. ತಕ್ಷಣ ಮನೆಯವರಿಗೆ ವಿಚಾರ ತಿಳಿಸಿ ಆಟೋ ರಿಕ್ಷದ ಮೂಲಕ ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮಹಿಳೆಯು ವಾಂತಿ ಮಾಡಲು ಪ್ರಾರಂಭಿಸಿದ್ದಾರೆ....
ಕಡಬದಕ್ಷಿಣ ಕನ್ನಡರಾಜಕೀಯಸುದ್ದಿಸುಳ್ಯ

ಬಿಜೆಪಿ ಯುವಮೊರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿಯಾಗಿ ಶ್ರೀಕೃಷ್ಣ ಎಂ.ಆರ್ ನೇಮಕ – ಕಹಳೆ ನ್ಯೂಸ್

ಸುಳ್ಯ: ಬಿಜೆಪಿ ಯುವಮೋರ್ಚಾ ದ.ಕ.ಜಿಲ್ಲಾ ಕಾರ್ಯದರ್ಶಿಯಾಗಿಶ್ರೀಕೃಷ್ಣ ಎಂ ಆರ್ ನೇಮಕಗೊಂಡಿದ್ದಾರೆ. ಯುವಮೋರ್ಚಾ ಸುಳ್ಯ ಮಂಡಲ ಸಮಿತಿ ಮಾಜಿ ಅಧ್ಯಕ್ಷರಾದ ಶ್ರಿಕೃಷ್ಣ ಅವರನ್ನು ಜಿಲ್ಲಾ ಕಾರ್ಯದರ್ಶಿಯಾಗಿ ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ನೇಮಕ ಮಾಡಿದ್ದಾರೆ....
ದಕ್ಷಿಣ ಕನ್ನಡಸುದ್ದಿಸುಳ್ಯ

ಅರಂಬೂರಿನಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ಸವಾರ ಸಾವು.

ಸುಳ್ಯ : ಬೈಕ್-ಕಾರು-ಬಸ್ ನಡುವಿನ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಂಪಾಜೆ ದೊಡ್ಡಡ್ಡ ನಿವಾಸಿ ಪರಮೇಶ್ವರ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅರಂಬೂರಿನ ಸಮೀಪ ಬೈಕ್-ಕಾರು-ಬಸ್ ನಡುವೆ ನಡೆದ ಅವಘಡದಲ್ಲಿ ಪರಮೇಶ್ವರ್ ಗಾಯಗೊಂಡಿದ್ದರುತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು....
ಜಿಲ್ಲೆದಕ್ಷಿಣ ಕನ್ನಡಸುಳ್ಯ

ಸುಳ್ಯ ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿಯಾಗಿ ಗಣೇಶ್ ಉದನಡ್ಕ ಆಯ್ಕೆ – ಕಹಳೆ ನ್ಯೂಸ್

ಕಾಣಿಯೂರು : ಸುಳ್ಯ ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿಯಾಗಿ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕರವರು ಆಯ್ಕೆಯಾಗಿದ್ದಾರೆ. ಸವಣೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರೂ ಆಗಿರುವ ಇವರು ಕಾಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ, ಹಾಲಿ ಸದಸ್ಯರಾಗಿ ಕಾಣಿಯೂರು ವರ್ತಕರ ಸಂಘದ ಅಧ್ಯಕ್ಷರಾಗಿ, ಕಾಣಿಯೂರು ಕಣ್ವರ್ಷಿ ಆಟೋ ರಿಕ್ಷಾ ಚಾಲಕ ಮಾಲಕ ಸಂಘದ ಗೌರವಾಧ್ಯಕ್ಷರಾಗಿ, ಪುಣ್ಚತ್ತಾರು ಶ್ರೀ ಹರಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ...
ಕಡಬದಕ್ಷಿಣ ಕನ್ನಡಸುದ್ದಿಸುಳ್ಯ

ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ಹೋಗಿದ್ದ ಮಹಿಳೆಯನ್ನು ಬೆನ್ನಟ್ಟಿ ತಿವಿದ ಕಾಡು ಹಂದಿ -ಕಹಳೆ ನ್ಯೂಸ್

ಕಡಬ: ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ಹೋಗಿದ್ದ ಮಹಿಳೆಗೆ ಕಾಡುಹಂದಿ ತಿವಿದು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಸುಳ್ಯದಿಂದ ವರದಿಯಾಗಿದೆ. ಸುಳ್ಯ ತಾಲೂಕು ದುಗಲಡ್ಕ ಕೂಟೇಲು ನಿವಾಸಿ ಪದ್ಮಾವತಿ ಎಂಬವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ಇಂದು ಮುಂಜಾನೆ ದುಗಲಡ್ಕ ಘಟಕದ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿರುವಾಗ ಪೊದೆಯಲ್ಲಿದ್ದ ಕಾಡುಹಂದಿ ಏಕಾಏಕಿ ಧಾಳಿ ನಡೆಸಿತೆನ್ನಲಾಗಿದೆ...
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯದ ಮಂಡೆಕೋಲು ಗ್ರಾಮದಲ್ಲಿ ಸಾಯುತ್ತಿರುವ ತೆಂಗಿನ ಮರಗಳು ; ಅಧಿಕಾರಿಗಳ ಭೇಟಿ, ಪರಿಶೀಲನೆ – ಕಹಳೆ ನ್ಯೂಸ್

ಸುಳ್ಯ: ಸಿರಿ ಕರಟುವ ಮೂಲಕ ಫಸಲು ಭರಿತ ತೆಂಗಿನ ಮರಗಳು ಸಾಯುತ್ತಿರುವ ಹಿನ್ನೆಲೆ ಯಲ್ಲಿ ತೋಟಗಾರಿಕೆ ಅಧಿಕಾರಿಗಳು ಸುಳ್ಯದ ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಡೆಕೋಲು ಗ್ರಾಮದ ಅಂಬ್ರೋಟ್ಟಿ ಪೇರಾಲು ಅಡ್ಡಂತ್ತಡ್ಕದ ಮಾಜಿ ಸೈನಿಕ ದೇರಣ್ಣ ಗೌಡ ಅವರ ತೋಟದ ಹಲವು ತೆಂಗಿನ ಮರಗಳು ಸತ್ತಿದ್ದು, ಸುಳ್ಯದ ತೋಟಗಾರಿಕೆ ಇಲಾಖೆಯ ಅಧಿಕಾರಿಗಳಾದ ಸುಹಾನ ಮತ್ತು ಅರಬಣ್ಣ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದರು. ಸುಳಿಕೊಳೆ ರೋಗದ ಲಕ್ಷಣ ಇದು ಸುಳಿಕೊಳೆ...
ದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ನಿವಾಸಿ ಸೇಸಪ್ಪ ಗೌಡ 5 ದಿನಗಳ ಹಿಂದೆ ಪುತ್ತೂರಿನಿಂದ ಕಾಣೆಯಾಗಿದ್ದಾರೆ – ಕಹಳೆ ನ್ಯೂಸ್

ಪುತ್ತೂರು: ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡ ಎಂಬಲ್ಲಿನ ನಿವಾಸಿ ಸೇಸಪ್ಪ ಗೌಡ(62) ಕಳೆದ 5 ದಿನಗಳ ಹಿಂದೆ ಪುತ್ತೂರಿನಿಂದ ಕಾಣೆಯಾಗಿದ್ದಾರೆ ಎಂದು ಅವರ ಪುತ್ರ ಲೋಕೇಶ್ ದೇವರಗುಂಡ ಎಂಬವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ. ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಿಂದ ಔಷಧಿ ಪಡೆದುಕೊಂಡು ಅಲ್ಲಿಂದ ತೆರಳಿದ ಅವರು ತಮ್ಮ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದಾರೆ. ಅಲ್ಪ ಮಟ್ಟಿಗೆ ಮಾನಸಿಕ ಅಸ್ವಸ್ಥಗೆ ಒಳಗಾಗಿದ್ದಾರೆ. ಸುಮಾರು 6 ಅಡಿ ಎತ್ತರ, ಗೋದಿ...
ಸುದ್ದಿಸುಳ್ಯ

ಕೊಲ್ಲಮೊಗ್ರು: ಪತ್ರಕರ್ತರ ಗ್ರಾಮ ವಾಸ್ತವ್ಯದಲ್ಲಿ ಗ್ರಾಮಸ್ಥರಿಂದ ಅಹವಾಲು ಸಲ್ಲಿಕೆ: ಕಂದಾಯ-‘ಅರಣ್ಯ ಸಮಸ್ಯೆ ಪರಿಹಾರಕ್ಕೆ ಪೈಲಟ್ ಯೋಜನೆ’– ಕಹಳೆ ನ್ಯೂಸ್

ಸುಳ್ಯ:ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಭಾಗಷಃ ಅರಣ್ಯ ಸಮಸ್ಯೆ ಸೇರಿ ಅರಣ್ಯ - ಕಂದಾಯ ನಡುವಿನ ಸಮಸ್ಯೆ ಇದೆ. ಇದರ ಪರಿಹಾರಕ್ಕೆ ಇಲ್ಲಿ ಪೈಲಟ್ ಯೋಜನೆಯಡಿಯಲ್ಲಿ ಸರ್ವೆ ಮಾಡಿಸಿ ಇಲ್ಲಿನ ಅರಣ್ಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇವೆ. 3-4 ತಿಂಗಳ ಯೋಜನೆ ಅಡಿಯಲ್ಲಿ ಸರ್ವೆ ಪೂರ್ತಿ ಮಾಡಲಾಗುವುದು. ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ...
1 6 7 8 9 10 23
Page 8 of 23
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ