Saturday, November 23, 2024

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

 ಖ್ಯಾತ ಸಾಹಿತಿ, ಕಥೆಗಾರ್ತಿ, ಆಕಾಶವಾಣಿ ಕಲಾವಿದೆ ಮನೋರಮಾ ಎಂ.ಭಟ್ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು: ಖ್ಯಾತ ಸಾಹಿತಿ, ಕಥೆಗಾರ್ತಿ, ಆಕಾಶವಾಣಿ ಕಲಾವಿದೆ ಹಾಗೂ ಮಂಗಳೂರಿನ ಹಿರಿಯ ನ್ಯಾಯವಾದಿ, ಯಕ್ಷಗಾನ ಕಲಾವಿದ ದಿ| ಮುಳಿಯ ಮಹಾಬಲ ಭಟ್ ಅವರ ಪತ್ನಿ ಮನೋರಮಾ ಎಂ.ಭಟ್(92) ವಯೋಸಹಜ ಕಾರಣದಿಂದ ಸೆ.15ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇಬ್ಬರು ಪುತ್ರರು, ಅಪಾರ ಬಂಧು, ಬಾಂಧವರನ್ನು ಅಗಲಿದ್ದಾರೆ. ಅವರ ಕಿರಿಯ ಸೊಸೆ ಖ್ಯಾತ ಒಡಿಸ್ಸಿ ನೃತ್ಯಗಾತಿ ಬಿಜೋಯಿನಿ ಸತ್ಪತಿ ಹೋರಾಟಗಾರ್ತಿ ಸಾಹಿತಿಯಾಗಿದ್ದ ಮನೋರಮಾ ಭಟ್ ಅವರು ಸಣ್ಣಕತೆಗಾರ್ಥಿಯಾಗಿ ಸಾಹಿತ್ಯಕ್ಷೇತ್ರ ಪ್ರವೇಶಿಸಿದವರು. ಸ್ವಯಂವರ(ಸಣ್ಣಕಥಾ ಸಂಕಲನ),...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

‘ಕಾಂತಾರ’ ಮಾದರಿಯಲ್ಲಿ ‘ಕಲ್ಜಿಗ’ ಕನ್ನಡದ ಮತ್ತೊಂದು ಸಿನಿಮಾ ತೆರೆಗೆ : ಕರಾವಳಿಯಲ್ಲಿ ಭಕ್ತರ ವಿರೋಧ.! – ಕಹಳೆ ನ್ಯೂಸ್

ಬೆಂಗಳೂರು : ಕಾಂತಾರ ಮಾದರಿಯಲ್ಲಿ ಮತ್ತೊಂದು ಸಿನಿಮಾ ತೆರೆಗೆ ಬಂದಿದ್ದು, ಕರಾವಳಿಯಲ್ಲಿ ಭಕ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಕೋಸ್ಟಲ್ ವುಡ್ ನ ಕಲಾವಿದರು ಒಟ್ಟುಗೂಡಿ 'ಕಲ್ಜಿಗ' ಎಂಬ ಕನ್ನಡ ಸಿನಿಮಾವನ್ನು ನಿರ್ಮಿಸಿದ್ದು, ಇಂದು ರಾಜ್ಯಾದ್ಯಂತ ತೆರೆಗೆ ಬಂದಿದೆ. ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಚಿತ್ರ ವಿವಾದವನ್ನು ಸೃಷ್ಟಿಸಿದೆ. ಈ ಚಿತ್ರದಲ್ಲಿ ಕೊರಗಜ್ಜನ ವೇಷಭೂಷಣ ಧರಿಸಿ ಶೂಟಿಂಗ್ ಮಾಡಲಾಗಿದ್ದು, ಭಕ್ತರಿಂದ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಸಿನಿಮಾದ ವಿರುದ್ಧ ಕಾನೂನು ಹೋರಾಟಕ್ಕೆ ಕೂಡ ಸಜ್ಜಾಗಿದ್ದಾರೆ. ಶರತ್...
ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಈದ್ ಮಿಲಾದ್ ದಿನ ನಾವೂ ದಾಳಿ ಮಾಡಿದ್ರೆ ಹೇಗಿರುತ್ತೆ : ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಎಚ್ಚರಿಕೆ – ಕಹಳೆ ನ್ಯೂಸ್

ಮಂಗಳೂರು: ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕೋಮುಗಲಭೆಗೆ ಪ್ರತ್ಯುತ್ತರ ನೀಡುವ ಭರದಲ್ಲಿ ಹಿಂದೂ ಮುಖಂಡ  ಶರಣ್ ಪಂಪ್ ವೆಲ್  ಹೇಳಿಕೆ ನೀಡಿದ್ದಾರೆ. ನಾಗಮಂಗಲದಲ್ಲಿ ಗಣೇಶ ಹಬ್ಬದ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿ ಗಲಭೆಗೆ ಕಾರಣರಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ನಿನ್ನೆ ಮಂಗಳೂರಿನಲ್ಲಿ ವಿಎಚ್ ಪಿ ಸಂಘಟನೆ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ವೇಳೆ ಶರಣ್ ಪಂಪ್ ವೆಲ್ ಈದ್ ಮಿಲಾದ್ ಮೆರವಣಿಗೆ ವೇಳೆ ನಾವು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಡ್ಯ ಕಲ್ಲುತೂರಾಟ ಘಟನೆ,ಸರಕಾರದ ಆಡಳಿತ ವೈಫಲ್ಯ :ಶಾಸಕ ಡಾ.ಭರತ್‌ ಶೆಟ್ಟಿ ಕಿಡಿ – ಕಹಳೆ ನ್ಯೂಸ್

ಸುರತ್ಕಲ್: ಮಂಡ್ಯದಲ್ಲಿ ಗಣೇಶ ಚತುರ್ಥಿ ಬಳಿಕ ಶೋಭಾಯಾತ್ರೆ ಸಂದರ್ಭ ನಡೆದ ಹಿಂದೂ ಭಕ್ತರ ಮೇಲೆ ಕಲ್ಲು ತೂರಾಟ ಘಟನೆ ಸರಕಾರದ ವೈಫಲ್ಯವಾಗಿದೆ. ಸೂಕ್ತ ಭದ್ರತೆ ಹಾಗೂ ಗುಪ್ತಚರ ವರದಿ ಸಂಗ್ರಹದಲ್ಲಿ ನಿರ್ಲಕ್ಷ್ಯವಾಗಿದೆ.ಈ ನಡುವೆ ಗೃಹ ಸಚಿವರು ಕಲ್ಲು ತೂರಾಟ ಅನಿರೀಕ್ಷಿತ, ಕೋಮು ವೈಷಮ್ಯವಲ್ಲ ಇದು ಸಣ್ಣವಿಚಾರ ಎಂದಿರುವುದು ಆಘಾತಕಾರಿ ಎಂದು ಶಾಸಕ ಡಾ.ಭರತ್‌ ಶೆಟ್ಟ ವೈ ಹೇಳಿದ್ದಾರೆ. ಉಡುಪಿ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ, ನನ್ನಮೇಲೆ ಕೇಸು ದಾಖಲಿಸಲು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು:’Fact Vid’ ಫೇಸ್ಬುಕ್ ಪೇಜ್ ಮೂಲಕ ಹಿಂದೂ ದೇವತೆಗಳ ಅಪಮಾನ; FIR ದಾಖಲು !ಹಿಂದೂ ಜನಜಾಗೃತಿ ಸಮಿತಿ ಮತ್ತು ಧರ್ಮಾಭಿಮಾನಿ ನ್ಯಾಯವಾದಿಗಳಿಂದ ದೂರು- ಕಹಳೆ ನ್ಯೂಸ್

ಮಂಗಳೂರು : 'Fact Vid' ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ ಮುಖಾಂತರ ಪ್ರಸಾರ ಮಾಡಲಾಗುತ್ತಿದೆ. ಈ Al ಆಧಾರಿತ ಚಿತ್ರಗಳಿಂದ ಕೋಟ್ಯಂತರ ಹಿಂದೂ ಬಾಂಧವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಸಂಬಂಧಿತ ಸೈಬರ್ ಕ್ರೈಮ್ ವಿಭಾಗವು ಇದರ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡು ಪೇಜ್ ನ ಅಡ್ಮಿನ್ ಗಳನ್ನು ಬಂಧಿಸಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ʼಕೇಂದ್ರ ಸರ್ಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ’ ದ.ಕ. ಲೀಡ್ ಬ್ಯಾಂಕ್ ಸಭೆಯಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸಂಸದ ಕ್ಯಾ. ಚೌಟ ಸೂಚನೆ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ/ಪಂಗಡ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್ ಗಳು ಉತ್ತೇಜನ ನೀಡಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಮಂಗಳೂರು ನಗರದಲ್ಲಿರುವ ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ದ.ಕ ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ರಸ್ತೆದಾಟುತ್ತಿದ್ದ ಮಹಿಳೆಗೆ ಆಟೊರಿಕ್ಷಾ ಢಿಕ್ಕಿ – ಆಟೋ ಎತ್ತಿ ತಾಯಿಯನ್ನು ಮೇಲಕ್ಕೆತ್ತಿದ ಪುತ್ರಿ- ಕಹಳೆ ನ್ಯೂಸ್

ಮಂಗಳೂರು: ರಸ್ತೆ ದಾಟುತ್ತಿದ್ದಾಗ ಆಟೋರಿಕ್ಷಾವೊಂದು ಡಿಕ್ಕಿಯಾಗಿ ಮಹಿಳೆಯೊಬ್ಬರು ರಿಕ್ಷಾದ ಅಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಕಿನ್ನಿಗೋಳಿಯ ರಾಮನಗರ ಬಳಿ ನಡೆದಿದೆ. ಅಪಘಾತದ ದೃಶ್ಯ ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರಾಜರತ್ನಪುರ ನಿವಾಸಿ ಚೇತನಾ (35) ಗಂಭೀರವಾಗಿ ಗಾಯಗೊಂಡ ಮಹಿಳೆ. ಫಿಗ್ಮಿ ಕಲೆಕ್ಷಮ್ ಮುಗಿಸಿ ಚೇತನಾ ಅವರು ಟ್ಯೂಷನ್‌ಗೆಂದು ತೆರಳಿದ್ದ ಪುತ್ರಿಯನ್ನು ಕರೆತರಲು ಬರುತ್ತಿದ್ದರು. ಈ ವೇಳೆ ಅವರು ರಾಮನಗರದ ಬಳಿ ಏಕಾಏಕಿ ರಸ್ತೆ ದಾಟಲು ಮುಂದಾಗಿದ್ದಾರೆ. ಈ ವೇಳೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಾಮದಪದವಿನ ಮಹಾಕಾಳಿ ಗದ್ದೆ ವಾಂಬೆಟ್ಟುವಿನಲ್ಲಿ ನಡೆದ “ಕೃಷಿ ಕಲಿ ನಲಿ” ಕೆಸರಿನ ಆಟದ ಜೊತೆ ಕೃಷಿಯ ಕಲಿಕೆ ವಿನೂತನ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೆ.ನಂ.ಬಾಲಕಿಯರ ನಿಲಯ ವಾಮದಪದವು ಮತ್ತು ಚೆನ್ನೈತ್ತೋಡಿ ಹಾಗೂ ಮೆ.ಪೂರ್ವ ಬಾಲಕರ ನಿಲಯ ವಾಮದಪದವು ಇವರ ಜಂಟಿ ಆಶ್ರಯದಲ್ಲಿ "ಕೃಷಿ ಕಲಿ ನಲಿ" ಕೆಸರಿನ ಆಟದ ಜೊತೆ ಕೃಷಿಯ ಕಲಿಕೆ ವಿನೂತನ ಕಾರ್ಯಕ್ರಮ ವಾಮದಪದವಿನಲ್ಲಿ ಮಹಾಕಾಳಿ ಗದ್ದೆ ವಾಂಬೆಟ್ಟುವಿನಲ್ಲಿ ನಡೆಯಿತು. ವಿದ್ಯಾರ್ಥಿಗಳಿಗೆ ಕೃಷಿಯ ಕಲಿಕೆಯ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು...
1 12 13 14 15 16 41
Page 14 of 41