ಮುಡಾ ಹಗರಣದಲ್ಲಿ ಹೈಕೋರ್ಟ್ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ : ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಂಸದ ಕ್ಯಾ. ಚೌಟ- ಕಹಳೆ ನ್ಯೂಸ್
ಮಂಗಳೂರು: ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರ ಭೂಹಗರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ. ಚೌಟ ಅವರು, ಹೈಕೋರ್ಟ್ ಪೀಠ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವುದು ರಾಜ್ಯದಲ್ಲಿ ಕಾಂಗ್ರೆಸ್...