ಉಳ್ಳಾಲ ಸೋಮೇಶ್ವರ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್
ಉಳ್ಳಾಲ : ಲೋಕಸಭೆ ಅಧಿವೇಶದ ನಡುವಿನಲ್ಲಿ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಲು ಮಂಗಳೂರಿಗೆ ಆಗಮಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುತ್ತಾರು ಮದನಿ ನಗರದಲ್ಲಿ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಾಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಪರಿಹಾರವನ್ನು ಶೀಘ್ರವಾಗಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದಾದ ಬಳಿಕ ಉಳ್ಳಾಲ ಸೋಮೇಶ್ವರ ಸಮುದ್ರತೀರದಲ್ಲಿ...