ಬೊಳಿಯಾರ್ ನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಗೆ ವಿಧಾನ ಪರಿಷತ್ ನೂತನ ಸದಸ್ಯ ಡಾ.ಧನಂಜಯ ಸರ್ಜಿ ತೀವ್ರ ಖಂಡನೆ – ಕಹಳೆ ನ್ಯೂಸ್
ಶಿವಮೊಗ್ಗ : ಸತತ ಮೂರನೇ ಭಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಜೀ ಅವರು ಅಧಿಕಾರ ಸ್ವೀಕರಿಸಿದ ನಂತರ ಮಂಗಳೂರು ಸಮೀಪದ ಬೋಳಿಯಾರ್ ನಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ತಂಡವು ನಡೆಸಿದ ಹಲ್ಲೆಯನ್ನು ವಿಧಾನ ಪರಿಷತ್ ನೂತನ ಸದಸ್ಯ ಡಾ.ಧನಂಜಯ ಸರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದ ಗೌರವಾನ್ವಿತ ಸ್ಪೀಕರ್ ಅವರ ಕ್ಷೇತ್ರದಲ್ಲೇ ಇಂತಹ ರಾಜಕೀಯ ದ್ವೇಷದ ದುಷ್ಕøತ್ಯಗಳು ನಡೆಯುತ್ತಿರುವುದು ಆತಂಕಕಾರಿಯಾಗಿದೆ. ಘಟನೆಯಲ್ಲಿ ಕಾರ್ಯಕರ್ತರ ಮೇಲೆ...