ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿಗೆ ತಿಂಗಳಾಂತ್ಯದೊಳಗೆ ಚಾಲನೆ: ಸಂಸದ ಚೌಟ-ಕಹಳೆ ನ್ಯೂಸ್
ಮಂಗಳೂರು: ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಮಂಜೂರಾತಿ ನೀಡಿದ್ದು, ಮಾರ್ಚ್ ಅಂತ್ಯದೊಳಗೆ ಇದಕ್ಕೆ ಚಾಲನೆ ನೀಡುವರು ಎಂದು ಸಂಸದ ಕ್ಯಾ|ಬ್ರಿಜೇಶ್ ಚೌಟ ತಿಳಿಸಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾದ ಸಂಸದರು, ಒಂದು ದಶಕದ ಬೇಡಿಕೆ ಇದು ಎಂದು ವಿವರಿಸಿದ್ದಾರೆ. ಈ ರೈಲಿಗೆ ಹಸಿರು ನಿಶಾನೆ ತೋರುವ ಬಗ್ಗೆ ಸಚಿವ ಸೋಮಣ್ಣ ಅವರೊಂದಿಗೆ ಚರ್ಚಿಸಿದ್ದು, ಉದ್ಘಾಟನೆಗೆ ಸಮಯ ನಿಗದಿಯಾಗಲಿದೆ. ಬಳಿಕ...