ಬೈಕ್ ನಿಯಂತ್ರಣತಪ್ಪಿ ಅಪ್ರಾಪ್ತ ಬಾಲಕ ಮೃತ್ಯು- ಕಹಳೆ ನ್ಯೂಸ್
ಕಡಬ: ಬೈಕ್ ನಲ್ಲಿ ಬರುತ್ತಿದ್ದ ಅಪ್ರಾಪ್ತ ಬಾಲಕನೋರ್ವ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಬಳಿಕ ಮೃತಪಟ್ಟ ಘಟನೆ ಜ.17 ರ ಮುಂಜಾನೆ ಕಡಬದ ಪೇರಡ್ಕದಲ್ಲಿ ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಮೃತ ಬಾಲಕ. ಪೇರಡ್ಕದ ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಬಾಲಕ ಶುಕ್ರವಾರ ಮುಂಜಾನೆ ಧರ್ಮಸ್ಥಳ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ಬರುತ್ತಿದ್ದ...