Recent Posts

Sunday, January 19, 2025

ಸಂತಾಪ

ಕಡಬದಕ್ಷಿಣ ಕನ್ನಡಸಂತಾಪಸುದ್ದಿ

ಕಡಬ : ಕೆರೆಗೆ ಈಜಲು ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತ್ಯು – ಕಹಳೆ ನ್ಯೂಸ್

ಈಜಲು ಕೆರೆಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆದಂಬಾಡಿ ಗ್ರಾಮದ ತಿಂಗಳಾಡಿಯ ಪಟ್ಟೆಯಲ್ಲಿ ನಡೆದಿದೆ. ಕಡಬ ಕರ್ಮಾಯಿ ನಿವಾಸಿ ಕಿರಣ್ ರೈ (40ವ) ಎಂಬವರು ಮೃತಪಟ್ಟ ವ್ಯಕ್ತಿ . ಸಂಜೀವ ರೈ ಎಂ.ರವರ ಪುತ್ರಿಯನ್ನು ವಿವಾಹವಾಗಿದ್ದು, ಪ್ರಸ್ತುತ ಪತ್ನಿ ಮನೆಯಲ್ಲಿ ವಾಸವಾಗಿದ್ದರು. ಮಾ.11ರಂದು ಸಂಜೆ ತೋಟದ ಕೆರೆಗೆ ನೀರು ತರಲೆಂದು ಪತಿ ಜೊತೆ ತೆರಳಿದ್ದು, ಆ ಬಳಿಕ ನಾನು ಕೆರೆಯಲ್ಲಿ ಈಜಾಡುತ್ತೇನೆ ಎಂದು ಹೇಳಿ ಕೆರೆಗೆ ಇಳಿದವರು...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಅಂಬಿಕಾ ವಿದ್ಯಾಸಂಸ್ಥೆಗಳ ಮಾತೃಸಂಸ್ಥೆಯಾಗಿರುವ ನಟ್ಟೋಜ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ್ ರಾವ್ ವಿಧಿವಶ – ಕಹಳೆ ನ್ಯೂಸ್

ಪುತ್ತೂರು: ಅಂಬಿಕಾ ವಿದ್ಯಾಸಂಸ್ಥೆಗಳ ಮಾತೃಸಂಸ್ಥೆಯಾಗಿರುವ ನಟ್ಟೋಜ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ್ ರಾವ್ (93) ಮಂಗಳವಾರ ಬೆಳಿಗ್ಗೆ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಸಾಮಾಜಿಕ ಹಾಗೂ ರಾಜಕೀಯವಾಗಿ ಸಕ್ರೀಯರಾಗಿದ್ದ ಪ್ರಗತಿಪರ ಕೃಷಿಕರೂ ಹೌದು. ವಿಶ್ವ ಹಿಂದೂ ಪರಿಷತ್ ನ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಯೋಧ್ಯೆಯ ರಾಮ ಮಂದಿರ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು. ಮಾಜಿ ಶಾಸಕ ರಾಂ ಭಟ್ ಅವರ ಆತ್ಮೀಯರಾಗಿದ್ದು, ರಾಜಕೀಯವಾಗಿಯೂ ಸಾಕಷ್ಟು ಕೆಲಸ ನಿರ್ವಹಿಸಿದ್ದಾರೆ. ಅವರು...
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಮಲಗಿದ್ದಲ್ಲೆ ಹೃದಯಾಘಾತಕ್ಕೆ ಬಲಿಯಾದ ಅವಿವಾಹಿತ ಯುವಕ – ಕಹಳೆ ನ್ಯೂಸ್

ಬಂಟ್ವಾಳ: ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾ.11ರಂದು ನಡೆದಿದೆ. ಮೆಲ್ಕಾರ್ ನಿವಾಸಿ ಉದಯ ( 36) ಮೃತಪಟ್ಟ ಯುವಕ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದ ಉದಯೋನ್ಮುಖ ಯುವಕ ಉದಯ ಅವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಜನಸ್ನೇಹಿಯಾಗಿ,ಜನಸೇವಕನಾಗಿದ್ದ ಉದಯ ಅವರು ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು. ಇಂದು ಬೆಳಿಗ್ಗೆ ಉದಯ ಎದ್ದ ಹೇಳಲಿಲ್ಲ ಎಂದು ಮನೆಯವರು ಎಚ್ಚರಿಸಿದಾಗ ಯಾವುದೇ ಪ್ರತಿಕ್ರಿಯೆ ಇಲ್ಲದಿರುವುದು...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಕಡಬ :ಬೈಕ್, ಮಿನಿ ಗೂಡ್ಸ್ ಟೆಂಪೋ ನಡುವೆ ಭೀಕರ ಅಪಘಾತ : ಪುತ್ತೂರಿನ ವಿವೇಕಾನಂದ ಕಾಲೇಜು ವಿದ್ಯಾರ್ಥಿ ಮೃತ್ಯು – ಕಹಳೆ ನ್ಯೂಸ್

ರಾಮಕುಂಜ : ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್(20ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶ್ರೀಜಿಸ್‌ರವರು ರಾಮಕುಂಜ ಶಾರದಾನಗರದಲ್ಲಿರುವ ಚಿಕ್ಕಮ್ಮನ ಮನೆಗೆ ಬಂದು ರಾತ್ರಿ ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು : ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್(64) ಮಾ.1ರ ಶುಕ್ರವಾರ ಇಂದು ಮುಂಜಾನೆ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ತಾ| ಕರುವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ಗೆ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಮತ್ತು...
ದೆಹಲಿಸಂತಾಪಸುದ್ದಿ

ಹನಿಮೂನ್ ಮೂಡ್ ನಲ್ಲಿದ್ದ ನವದಂಪತಿಯ ದಾರುಣ ಅಂತ್ಯ : ಹೃದಯಾಘಾತಕ್ಕೆ ಬಲಿಯಾದ ಪತಿ : ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಪತ್ನಿ – ಕಹಳೆ ನ್ಯೂಸ್

ನವದೆಹಲಿ: ಹನಿಮೂನ್ ಮೂಡ್ ನಲ್ಲಿದ್ದ ನವದಂಪತಿ ದಾರುಣವಾಗಿ ಮೃತಪಟ್ಟ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ವಿಹಾರಕ್ಕೆಂದು ತೆರಳಿದ್ದ ದಂಪತಿಯಲ್ಲಿ ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪತಿಯ ಸಾವಿನಿಂದ ಆಘಾತಗೊಂಡು ಪತ್ನಿ ತಮ್ಮ ಅಪಾರ್ಟೆಂಟ್  ಕಟ್ಟಡದ 7ನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾರೆ. 2023 ನವೆಂಬರ್ 30 ರಂದು ಅಭಿಷೇಕ್(25) ಹಾಗೂ ಅಂಜಲಿ(23) ವಿವಾಹ ನಡೆದಿದೆ. ಬಳಿಕ ಇಬ್ಬರೂ ದೆಹಲಿಯಲ್ಲೇ ನೆಲೆಸಿದ್ದರು. ಸೋಮವಾರ ದಂಪತಿ ಜೊತೆಯಾಗಿ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಭಿಷೇಕ್...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಸುರತ್ಕಲ್ ಖಾಸಗಿ ಅನುದಾನಿತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ : ಪರೀಕ್ಷೆ ಮುಗಿಸಿ ನಾಪತ್ತೆಯಾದ ವಿದ್ಯಾರ್ಥಿಗಳ ಶವ ನದಿಯಲ್ಲಿ ಪತ್ತೆ ! – ಕಹಳೆ ನ್ಯೂಸ್

ಸುರತ್ಕಲ್: ಸುರತ್ಕಲ್ ಖಾಸಗಿ ಅನುದಾನಿತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ಮಂಗಳವಾರ ಎಸ್. ಎಸ್. ಎಲ್. ಸಿ. ಪರೀಕ್ಷೆ ಬರೆದ ಬಳಿಕ ಮನೆಗೆ ಮರಳದೆ ನಾಪತ್ತೆಯಾದ ಘಟನೆ ನಡೆದಿದ್ದು, ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿ ಕೊಪ್ಪಳ ಅಣೆಕಟ್ಟ ರೈಲ್ವೇ ಸೇತುವೆಯ ಕೆಳಭಾಗದ ನದಿಯಲ್ಲಿ ಪತ್ತೆಯಾಗಿದೆ. ಸುರತ್ಕಲ್ ಅಗರಮೇಲು ನಿವಾಸಿ ಯಶ್ವಿತ್ (15), ಹಳೆಯಂಗಡಿ ತೋಕೂರು ನಿವಾಸಿ ರಾಘವೇಂದ್ರ (15), ಗುಡ್ಡಕೊಪ್ಪ ನಿವಾಸಿ ನಿರೂಪ (15) ಮತ್ತು ಚಿತ್ರಾಪುರ ನಿವಾಸಿ ದೇವದಾಸ್ ಎಂಬವರ...
ಬೆಂಗಳೂರುರಾಜಕೀಯರಾಜ್ಯಸಂತಾಪಸುದ್ದಿ

ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಿಧನ – ಕಹಳೆ ನ್ಯೂಸ್

ಬೆಂಗಳೂರು, ಫೆ 25 : ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್​ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ರಾಜಾ ವೆಂಕಟಪಟ್ಟ ನಾಯಕ ಅವರಿಗೆ ಕಿಡ್ನಿ ಸ್ಟೋನ್ ಆಗಿದ್ದು, ಆಪರೇಶನ್ ಸಹ ಮಾಡಲಾಗಿತ್ತು. ಕಳೆದ...
1 8 9 10 11 12 23
Page 10 of 23