ಖ್ಯಾತ ನೃತ್ಯ ಗುರು ದಿ. ಕುದ್ಕಾಡಿ ವಿಶ್ವನಾಥ ರೈ ಹಾಗೂ ವಿದುಷಿ ನಯನಾ ವಿ ರೈ ಅವರ ಸುಪುತ್ರಿ ನೃತ್ಯ ವಿದುಷಿ ಆಸ್ತಿಕಾ ಸುನಿಲ್ ಶೆಟ್ಟಿ ನಿಧನ ; ಕಂಬನಿ ಮಿಡಿದ ಕಲಾರಂಗ – ಕಹಳೆ ನ್ಯೂಸ್
ಪುತ್ತೂರು : ಖ್ಯಾತ ನೃತ್ಯ ಗುರು ವಿದ್ವಾನ್ ದಿ. ಕುದ್ಕಾಡಿ ವಿಶ್ವನಾಥ ರೈ ಅವರ ಕಿರಿಯ ಪುತ್ರಿ ಪಡುವನ್ನೂರು ಗ್ರಾಮದ ಕುದ್ಕಾಡಿ ನಿವಾಸಿ, ಬಹರೈನ್ ನಲ್ಲಿ ನೆಲೆಸಿದ್ದ ನೃತ್ಯ ವಿದುಷಿ ಆಸ್ತಿಕಾ ಸುನಿಲ್ ಶೆಟ್ಟಿ (46) ಮಾ.7 ರಂದು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತಿ, ಪುತ್ರನನ್ನು ಅಗಲಿದ್ದಾರೆ. ಕಲಾವಿದರ ಕುಟುಂಬದಲ್ಲಿ ಜನಿಸಿದ ಆಸ್ತಿಕಾ ರೈ ಪದಡ್ಕ ವಿಶ್ವಕಲಾನಿಕೇತನದಲ್ಲಿ ಕಲಿತು ನೃತ್ಯ, ಯಕ್ಷಗಾನದಲ್ಲಿ ಪಳಗಿದ್ದರು. ಭರತನಾಟ್ಯ ಕಲಾವಿದೆಯಾಗಿ, ಯಕ್ಷಗಾನ...