Saturday, April 5, 2025

ಸಂತಾಪ

ಕಾಸರಗೋಡುಬದಿಯಡ್ಕಮಂಜೇಶ್ವರಸಂತಾಪಸುದ್ದಿ

265ರಷ್ಟು ಮನೆಗಳನ್ನು ನಿರ್ಮಿಸಿ ಕೊಡುಗಡೆ ನೀಡಿದ್ದ ಕಾಸರಗೋಡಿನ ಕೊಡುಗೈ ದಾನಿ, ಸಮಾಜ ಸೇವಕ ಸಾಯಿರಾಂ ಗೋಪಾಲಕೃಷ್ಣ ಭಟ್ ನಿಧನ – ಕಹಳೆ ನ್ಯೂಸ್

ಕಾಸರಗೋಡು, ಜ 22 : ಕೊಡುಗೈ ದಾನಿ, ಸಮಾಜ ಸೇವಕ, ಸಾಯಿರಾಂ ಗೋಪಾಲಕೃಷ್ಣ ಭಟ್(85) ಅವರು ಶನಿವಾರ ಮಧ್ಯಾಹ್ನ ಕಿಳಿಂಗಾರಿನಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸಾಯಿರಾಂ ಗೋಪಾಲಕೃಷ್ಣ ಅವರು ಜಾತಿ, ಮತ, ಭೇದ ವಿಲ್ಲದೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳನ್ನು ಗುರುತಿಸಿ 265ರಷ್ಟು ನಿರ್ಮಿಸಿ ನೀಡುವ  ಮೂಲಕ ಸೇವೆ ನೀಡಿದ್ದರು. ಬಡ ಕುಟುಂಬಗಳಿಗೆ ಮನೆ, ಸ್ವ ಉದ್ಯೋಗಕ್ಕೆ ಸಹಾಯ ನೀಡುತ್ತಿದ್ದರು. ಈಗಾಗಲೇ ಅಲ್ಲದೆ ಅದೆಷ್ಟೋ ಕುಟುಂಬಗಳಿಗೆ ಆರ್ಥಿವಾಗಿಯೂ ಸಹಕಾರ ನೀಡಿದ್ದರು. ಶ್ರೀ ಸತ್ಯ ಸಾಯಿಬಾಬಾ...
ಬೆಂಗಳೂರುಸಂತಾಪಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ವಿಧಿವಶ- ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ಅನಾರೋಗ್ಯದಿಂದ ವಿಧಿವಶರಾಗಿದ್ದು, ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವುಂಟಾಗಿದೆ. ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೆ.ವಿ. ರಾಜು, ಬೆಂಗಳೂರಿನ ರಾಜಾಜಿನಗರ ನಿವಾಸದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಇಂದ್ರಜಿತ್, ಯುದ್ಧಕಾಂಡ, ಬೆಳ್ಳಿ ಮೋಡ, ಹುಲಿಯಾ, ಬೆಳ್ಳಿ ಕಾಲುಂಗುರ, ಸಂಗ್ರಾಮ ಸೇರಿದಂತೆ ಹಲವು ಹಿಟ್ ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ರಾಜಾಜಿನಗರ ನಿವಾಸದಲ್ಲಿಯೇ ಕೆ.ವಿ. ರಾಜು ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ...
ಸಂತಾಪಹೆಚ್ಚಿನ ಸುದ್ದಿ

ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಇಂದು ಕುಟುಂಬಸ್ಥರು ಹಾಗೂ ಸ್ನೇಹಿತರಿಂದ ಅಂತಿಮ ದರ್ಶನ ಬಳಿಕ ಅಂತ್ಯಕ್ರಿಯೆ -ಕಹಳೆ ನ್ಯೂಸ್

ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬುಧವಾರ ನಿಧನರಾಗಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಆಸ್ಪತ್ರೆಯಿಂದ ಯಲಹಂಕ ವಾಯುನೆಲೆಗೆ ಕ್ಯಾಪ್ಟನ್ ವರುಣ್ ಸಿಂಗ್ ಪಾರ್ಥಿವ ಶರೀರ ರವಾನೆಯಾಗಿದ್ದು, ಬಳಿಕ ಯಲಹಂಕದಿಂದ ಭೂಪಾಲ್‍ಗೆ ಪಾರ್ಥಿವ ಶರೀರ ರವಾನೆಯಾಗಿದೆ. ಬೆಳಗ್ಗೆ 10 ಗಂಟೆಗೆ ಕಮಾಂಡೋ ಆಸ್ಪತ್ರೆಯಿಂದ ಯಲಹಂಕ ಏರ್ ಬೇಸ್‍ಗೆ ಪಾರ್ಥೀವ ಶರೀರ ತೆಗೆದುಕೊಂಡು ಬಂದು, ಬಳಿಕ ಗೌರವ...
ರಾಷ್ಟ್ರೀಯಸಂತಾಪಸುದ್ದಿ

ಕುನೂರು ಬಳಿ ನಡೆದ ಸೇನಾ ಹೆಲಿಕಾಪ್ಟರ್ ಅಪಘಾತ ಫಲಿಸಲಿಲ್ಲ ಪ್ರಾರ್ಥನೆ ; ಐಎಎಫ್​ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ – ಕಹಳೆ ನ್ಯೂಸ್

ಬೆಂಗಳೂರು, ಡಿ 15 : ಭಾರತೀಯರ ತಮಿಳುನಾಡಿನ ಕುನೂರು ಬಳಿ ನಡೆದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕಿ ಉಳಿದಿದ್ದ ಏಕೈಕ ಯೋಧ ಐಎಎಫ್​ ಗ್ರೂಪ್​​ ಕ್ಯಾಪ್ಟನ್​ ವರುಣ್​ ಸಿಂಗ್ ಚಿಕಿತ್ಸೆ ಫಲಿಸದೆ ಬೆಂಗಳೂರಿನ ಕಮಾಂಡ್​ ಆಸ್ಪತ್ರೆಯಲ್ಲಿ ಡಿ. 15 ರ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಭಾರತೀಯ ವಾಯುಪಡೆ ಟ್ವೀಟ್ ಮೂಲಕ ಈ ಕುರಿತು ಮಾಹಿತಿ ಹಂಚಿಕೊಂಡಿದೆ. ವರುಣ್​ ಸಿಂಗ್​ರ ಉಳಿವಿಗಾಗಿ ಭಾರತೀಯರು ಸಲ್ಲಿಸಿದ ಪ್ರಾರ್ಥನೆ ಫಲಿಸಲಿಲ್ಲ. ತಮಿಳುನಾಡಿನ ಸೂಲೂರು ಎಂಬಲ್ಲಿ ಸಂಭವಿಸಿದ ವಾಯುಪಡೆಯ...
ಕೊಡಗುಸಂತಾಪಸುದ್ದಿ

ಪೊಲೀಸ್ ಸೇವೆಯಿಂದ ನಿವೃತ್ತಿ ಪಡೆಯುವ ಒಂದು ತಿಂಗಳ ಮುಂಚೆಯೇ ಕೊನೆಯುಸಿರೆಳೆದ ಮಡಿಕೇರಿಯ ಎಸ್.ಐ.ಚಿನ್ನಪ್ಪ ನಾಯ್ಕ- ಕಹಳೆ ನ್ಯೂಸ್

ಕಡಬ: ಮಡಿಕೇರಿಯಲ್ಲಿ ಎಸ್.ಐ.ಯಾಗಿ ಸೇವೆ ಸಲ್ಲಿಸುತ್ತಿದ್ದ ಸುಳ್ಯ ತಾಲೂಕು ನಡುಗಲ್ಲು ನಿವಾಸಿ ಚಿನ್ನಪ್ಪ ನಾಯ್ಕ (59) ನವೆಂಬರ್ ತಿಂಗಳಿನಲ್ಲಿ ಎಸ್.ಐ.ಆಗಿ ಭಡ್ತಿಗೊಂಡಿದ್ದರು. ಆರೋಗ್ಯವಾಗಿದ್ದ ಇವರು ರಜೆಯ ಹಿನ್ನಲೆಯಲ್ಲಿ ಮನೆಗೆ ಬಂದಿದ್ದರು. ಆದರೆ ಇಂದು ಮುಂಜಾನೆ ಏಕಾಏಕಿ ಅಸ್ವಸ್ಥಗೊಂಡ ಇವರು, ಹೃದಯಾಘಾತದಿಂದ ಅಸುನೀಗಿದ್ದಾರೆ. ಅಸ್ವಸ್ಥಗೊಂಡ ತಕ್ಷಣವೇ ಕಡಬ ಸರಕಾರಿ ಆಸ್ಪತ್ರೆಗೆ ಕರೆತರಲಾಗಿತ್ತಾದರೂ ದಾರಿ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದರು. ಮುಂದಿನ ತಿಂಗಳು ನಿವೃತ್ತಿ ಹೊಂದಲಿದ್ದ ಇವರು, ನಿವೃತ್ತಿಗೂ ಮುನ್ನವೇ ಬದುಕಿನ ಪಯಣಕ್ಕೆ ಪೂರ್ಣವಿರಾಮವಿಟ್ಟಿದ್ದಾರೆ. ಕಡಬ...
ದಕ್ಷಿಣ ಕನ್ನಡರಾಜ್ಯಸಂತಾಪಸುದ್ದಿ

27ರ ಹರೆಯದ ತೆಲುಗಿನ ಯುವ ನಟಿ, ಯೂಟ್ಯೂಬರ್ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಹೈದರಬಾದ್, ನ 08 : ಟಾಲಿವುಡ್‌ನ ಯುವ ನಟಿ, ಯೂಟ್ಯೂಬ್ ವೀಡಿಯೋಗಳಿಂದ ಪ್ರಸಿದ್ದ ಪಡೆದ, ಶ್ರೇಯಾ ಮುರಳಿಧರ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೂಲತಃ ಹೈದರಾಬಾದ್‌ವರಾದ 27ರ ಹರೆಯ ಶ್ರೇಯಾ ಮುರಳಿಧರ್ ಆಕೆಯ ಯೂಟ್ಯೂಬ್ ಚಾನಲ್‌ನಲ್ಲಿ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದಳು. ಯೂಟ್ಯೂಬರ್ ಆಗಿ, ಕಿರುತೆರೆಯಲ್ಲಿ ಹೆಸರು ಮಾಡಿ, ಅಂದು ಕೊಂಡದ್ದನ್ನ ಸಾಧಿಸಿ, ಭರವಸೆ ನಟಿಯಾಗಿ ಬೆಳೆದಿದ್ದ ಶ್ರೇಯಾ 'ಪೆಲ್ಲಿ ಚೂಪುಲು' ರಿಯಾಲಿಟಿ ಶೋ ದಲ್ಲೂ ಶ್ರೇಯಾ ಭಾಗಿಯಾಗಿ ಗಮನ ಸೆಳೆದಿದ್ದರು. ಯುವತಾರೆಯ ಸಾವಿಗೆ ಸಂತಾಪಗಳ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಮ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಸಂಸ್ಥೆಗಳ ಸ್ಥಾಪನೆಗೆ ಮತ್ತು ಬೆಳವಣಿಗೆಗೆ ಬೆನ್ನೆಲುಬಾಗಿದ್ದ ಹಿರಿಯ ಮುತ್ಸದ್ದಿ ಬಿಜೆಪಿಯ ಭೀಷ್ಮ ಎಂದೇ ಪ್ರಖ್ಯಾತಿಯಾಗಿದ್ದ ರಾಮಭಟ್ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಗೋಪಾಲಕೃಷ್ಣ ಭಟ್ ಎಂ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಉರಿಮಜಲು ರಾಮ ಭಟ್ಟರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ರಾಮ ಭಟ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಅವರು ಮಾತಾಡಿದರು. ರಾಮ ಭಟ್...
ದಕ್ಷಿಣ ಕನ್ನಡಸಂತಾಪಸುದ್ದಿ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಬಪ್ಪಳಿಗೆಯಲ್ಲಿ ರಾಮ ಭಟ್ ರಿಗೆ ಶ್ರದ್ದಾಂಜಲಿ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿಶಾಲವಾಗಿ ಬೆಳೆದ ವೃಕ್ಷ ತನ್ನ ರೆಂಬೆ ಕೊಂಬೆಗಳನ್ನು ಬಾಗಿಸಿ ನಿಲ್ಲುತ್ತದೆ. ಸಜ್ಜನರೂ ಕೂಡ ತಾವು ಬಾಗಿಯೇ ಬೆಳೆಯುತ್ತಾರೆ. ಕೇವಲ ಮೂರ್ಖರು ಹಾಗೂ ದುರ್ಜನರು ಮಾತ್ರ ಒಣಗಿದ ಕಟ್ಟಿಗೆಯಂತೆ ಬಾಗದೆ ಉಳಿಯುತ್ತಾರೆ. ನೇರವಾಗಿ ನಿಂತಿದ್ದೇವೆ ಅನ್ನುವುದೇ ಬದುಕಿನ ಸಾರ್ಥಕ್ಯವಲ್ಲ. ಉರಿಮಜಲು ರಾಮ ಭಟ್ಟರು ಸೌಜನ್ಯಸಹಿತರಾಗಿ, ಜನರ ವಿಶ್ವಾಸದ ಕೇಂದ್ರವಾಗಿ, ಅಸಂಖ್ಯ ಜನರಿಗೆ ನೆರಳಾಗಿ ಬದುಕಿದ ಮಹಾನ್ ವ್ಯಕ್ತಿ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಡಾ.ಎಚ್.ಮಾಧವ...
1 19 20 21 22 23 26
Page 21 of 26
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ