ಇಹಲೋಕ ತ್ಯಜಿಸಿದ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ – ಕಹಳೆ ನ್ಯೂಸ್
ಅಂಕೋಲಾ: ಪರಿಸರ ಪ್ರೇಮಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ (86) ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಇಂದು (ಡಿ.16) ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ತುಳಸಿಗೌಡ ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಪ್ರೇಮಿ ಎಂದು ಹೆಸರಾಗಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ಮನೆಯಲ್ಲಿ ತೀರಾ ಬಡತನವಿದ್ದರೂ...