ಬಿಂದಿಗೆ ತೆಗೆಯಲು ಬಾವಿಗೆ ಇಳಿದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ವ್ಯಕ್ತಿ ಮೃತ್ಯು-ಕಹಳೆ ನ್ಯೂಸ್
ಮಣಿಪಾಲ: ಕೊಡಪಾನ ತೆಗೆಯಲು ಬಾವಿಗೆ ಇಳಿದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮಣಿಪಾಲದ ಸರಳೆಬೆಟ್ಟುವಿನ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಬಳಿ ನಡೆದಿದೆ. ಮೃತರನ್ನು ಸರಳಬೆಟ್ಟು ನಿವಾಸಿ ಕೂಲಿ ಕಾರ್ಮಿಕ ಶಿವ ನಾಯ್ಕ್(50) ಎಂದು ಗುರುತಿಸಲಾಗಿದ್ದು, ಇವರು ನೆರೆಕರೆಯ ಕಲ್ಯಾಣಿ ಎಂಬವರ ಬಾವಿಯಲ್ಲಿ ಬಿದ್ದಿರುವ ಕೊಡಪಾನವನ್ನು ತೆಗೆಯಲು ಬಾವಿಗೆ ಇಳಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಅಗ್ನಿ ಶಾಮಕ...