ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ರಕ್ತ ಸ್ರಾವದಿಂದ ಮೃತ್ಯು- ಕಹಳೆ ನ್ಯೂಸ್
ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ತಾಲೂಕಿನ ಬದ್ಯಾರ್ ನ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ (26) ಎರಡನೇ ಹೆರಿಗೆಗಾಗಿ ಎ. 3ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಎ. 4ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಹೆರಿಗೆ ಅನಂತರ ವಿಪರೀತ ರಕ್ತ ಸ್ರಾವ ಉಂಟಾಗಿದ್ದು ರಾತ್ರಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದರಿಂದ ಕುಟುಂಬಸ್ಥರು ಆಕ್ರೋಶಗೊಂಡರಲ್ಲದೇ...