ಯಕ್ಷರಂಗದ ಹಿರಿಯ ಕಲಾವಿದ ಸಂಪಾಜೆ ಶೀನಪ್ಪ ರೈ ಇನ್ನಿಲ್ಲ – ಕಹಳೆ ನ್ಯೂಸ್
ಮಂಗಳೂರು: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ಹಲವು ದಶಕಗಳ ಕಾಲ ಯಕ್ಷ ಸೇವೆ ಮಾಡಿದ್ದಸಂಪಾಜೆ ಶೀನಪ್ಪ ರೈ ಅವರು ಇಂದು ನಿಧನರಾಗಿದ್ದಾರೆ. ಕೆಲವು ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶೀನಪ್ಪ ರೈ ಅವರು ಮಂಗಳೂರಿನ ಪುತ್ರನ ಮನೆಯಲ್ಲಿ ವಾಸವಿದ್ದರು. ರಕ್ತಬೀಜ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಪಾತ್ರಗಳಿಗೆ ಪ್ರಸಿದ್ಧರಾಗಿದ್ದ ಶೀನಪ್ಪ ರೈ ಅವರು ಜನಿಸಿದ್ದು ಕೊಡಗು ಜಿಲ್ಲೆಯ ಸಂಪಾಜೆಯಲ್ಲಿ. ತಂದೆ ಕೂಡಾ ಯಕ್ಷಗಾನ ಕಲಾವಿದರಾಗಿದ್ದರು. ಆರಂಭಿಕ ಪಾಠವನ್ನು ತಂದೆಯಿಂದ ಕಲಿತ ಅವರು...