ಡಾ. ಅನುರಾಧಾ ಕುರುಂಜಿಯವರಿಗೆ “ಶತಶೃಂಗ” ಪ್ರಶಸ್ತಿ ಪ್ರದಾನ; ಅಂತಾರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ-ಕಹಳೆ ನ್ಯೂಸ್
ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಸುಳ್ಯದ ಡಾ. ಅನುರಾಧಾ ಕುರುಂಜಿಯವರಿಗೆ ಸ್ವರ್ಣಭೂಮಿ ಫೌಂಡೇಶನ್ ಕೋಲಾರದವರು ಕೊಡಮಾಡಿದ ಪ್ರತಿಷ್ಠಿತ "ಶತ ಶೃಂಗ” ಪ್ರಶಸ್ತಿಯನ್ನು ಎಪ್ರಿಲ್ 11ರಂದು ಪ್ರದಾನ ಮಾಡಲಾಯಿತು. ಕಾಸರಗೋಡು ನುಲ್ಲಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ ಹಾಗೂ ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ಜಂಟಿಯಾಗಿ ಆಯೋಜಿಸಿದ "ಕೇರಳ -ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವ 2024 ರಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು....