ವರಮಹಾಲಕ್ಷ್ಮೀ ವ್ರತದ ನಿಮಿತ್ತ ವಿಶೇಷ ಲೇಖನ – ಕಹಳೆ ನ್ಯೂಸ್
ಶ್ರೀ ವರಮಹಾಲಕ್ಷ್ಮೀ ವ್ರತದ ಧಾರ್ಮಿಕ ಹಿನ್ನೆಲೆ ಸರ್ವೇಸಾಮಾನ್ಯವಾಗಿ ಹಬ್ಬ, ಆಚರಣೆಗಳನ್ನು ವೈಯಕ್ತಿಕವಾಗಿ ಆಚರಿಸುವಾಗ ಅದು ವ್ರತವಾಗುತ್ತದೆ. ಒಟ್ಟಿಗೆ ಒಂದು ಕಡೆ ಸೇರಿ ಆಚರಿಸುವಾಗ ಅದು ಉತ್ಸವವಾಗುತ್ತದೆ. ನಮ್ಮ ಅನೇಕ ವ್ರತಗಳು ಚಾತುರ್ಮಾಸದ ನಾಲ್ಕು ತಿಂಗಳಿನಲ್ಲಿ ಬರುತ್ತವೆ. ಅದರಲ್ಲಿಯೂ ಶ್ರಾವಣ ಮಾಸವು ಮಹತ್ತ್ವದ್ದಾಗಿದೆ. ಶ್ರಾವಣದಲ್ಲಿ ಬರುವಂತಹ ಶ್ರೀ ವರಮಹಾಲಕ್ಷ್ಮೀ ವ್ರತವು ಸುಮಂಗಲೆಯರಿಗೆ ಒಂದು ಮಹತ್ತ್ವದ ವ್ರತವಾಗಿದೆ. ಅಸುರರಿಂದ ರಕ್ಷಣೆಯಾಗಲು, ಸಕಲ ಸಂಪತ್ತು ಪ್ರಾಪ್ತವಾಗಲು ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಶಕ್ತಿಯ ಉಪಾಸನೆಯನ್ನು...