ಸಿಡ್ನಿಯಲ್ಲಿ ಪ್ರಧಾನಿ ಸ್ವಾಗತಕ್ಕೆ ಕರಾವಳಿಯ ತಂಡದ ನೃತ್ಯ ; ಯಕ್ಷಗಾನದ ಸೊಬಗನ್ನು ಅಳವಡಿಸಿದ ವಿಶೇಷ ನೃತ್ಯದ ಮೂಲಕ ನರೇಂದ್ರ ಮೋದಿಯವರಿಗೆ ಸ್ವಾಗತ – ಕಹಳೆ ನ್ಯೂಸ್
ಮಂಗಳೂರು: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೇ 23ರಂದು ಸಿಡ್ನಿಯಲ್ಲಿ ಭಾರತೀಯ ನಿವಾಸಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆಗ ಮೋದಿಯವರನ್ನು ಸ್ವಾಗತಿಸಲು ನಡೆಯಲಿರುವ ವಿಶೇಷ ನೃತ್ಯ ಕಾರ್ಯಕ್ರಮವೊಂದು ಮಂಗಳೂರು ಮೂಲದವರಿಂದ ಸಿದ್ಧಗೊಂಡಿದೆ. ಮಂಗಳೂರು ಮೂಲದ ವಿದುಷಿ ಪಲ್ಲವಿ ಭಾಗವತ್ ಅವರು ತಮ್ಮ ನೃತ್ಯ ಸಂಸ್ಥೆ “ನಾಟ್ಯೋಕ್ತಿ ಶಿಷ್ಯ ವೃಂದದೊಂದಿಗೆ “ಕಾಂತಾರ’ ಸಿನೆಮಾದ ಹಾಡುಗಳ ಮೂಲಕ ಮನರಂಜಿಸಲು ಸಜ್ಜಾಗಿದ್ದಾರೆ. ಕರ್ನಾಟಕದ ಹಳ್ಳಿಯ ಸೊಬಗನ್ನು ತೋರಿಸುವ ಜಾನಪದ ನೃತ್ಯ ಹಾಗೂ...