India vs Bangladesh: : ಪಿಂಕ್ ಬಾಲ್ ಡೇ ನೈಟ್ ಟೆಸ್ಟ್: ಇಶಾಂತ್ ದಾಳಿಗೆ ತರೆಗೆಲೆಗಳಂತೆ ಉದುರಿದ ಬಾಂಗ್ಲಾ ಬ್ಯಾಟ್ಸ್ಮನ್ಗಳು – ಕಹಳೆ ನ್ಯೂಸ್
ಕೋಲ್ಕೊತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಬಾಂಗ್ಲಾದೇಶ ಡೇ ನೈಟ್ ಟೆಸ್ಟ್ ಮೊದಲ ಇನಿಂಗ್ಸ್ನಲ್ಲಿ ಬಾಂಗ್ಲಾ 106 ರನ್ಗೆ ಸರ್ವಪತನ ಕಂಡಿದೆ. ಟೀಂ ಇಂಡಿಯಾ ವೇಗಿಗಳ ಮಾರಕ ದಾಳಿಗೆ ತತ್ತರಿಸಿರುವ ಬಾಂಗ್ಲಾ ಬ್ಯಾಟ್ಸ್ಮನ್ಗಳು ಮೊದಲ ಇನಿಂಗ್ಸ್ನಲ್ಲಿ ಕೇವಲ 30.3 ಓವರ್ಗಳನ್ನು ಎದುರಿಸಲು ಮಾತ್ರ ಶಕ್ತರಾದರು. ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬಾಂಗ್ಲಾ ತಂಡಕ್ಕೆ ಆರಂಭದಲ್ಲೇ ಪಿಂಕ್ ಬಾಲ್ ಶಾಕ್ ನೀಡುವಲ್ಲಿ ಟೀಂ ಇಂಡಿಯಾ ವೇಗಿಗಳು ಯಶಸ್ವಿಯಾಗಿದ್ದರು. ಬಾಂಗ್ಲಾ...