ಇಂದು ಮಧ್ಯಾಹ್ನದ ವೇಳೆಗೆ ರೇವಣ್ಣ ರಿಲೀಸ್; ಜೈಲಿನ ಬಳಿ ಪೊಲೀಸ್ ಬಿಗಿ ಭದ್ರತೆ – ಕಹಳೆ ನ್ಯೂಸ್
ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ರೇವಣ್ಣ ರಿಲೀಸ್ ಆಗಲಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಲವು ಷರತ್ತುಗಳನ್ನ ವಿಧಿಸಿ ಬೇಲ್ ಮಂಜೂರು ಮಾಡಿದೆ. ಜಾಮೀನಿಗೆ ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್, ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ...