ಉಡುಪಿ ವಿಡಿಯೋ ಪ್ರಕರಣ : ಸಂತ್ರಸ್ತೆಯಿಂದ ಹೇಳಿಕೆ ಪಡೆದ ಸಿಐಡಿ, ಘಟನೆ ಮರುಸೃಷ್ಟಿಸಿ ತನಿಖೆ – ಕಹಳೆ ನ್ಯೂಸ್
ಉಡುಪಿ : ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣದ ಸಂತ್ರಸ್ಥೆ ವಿದ್ಯಾರ್ಥಿನಿಯಿಂದ ಬುಧವಾರ ಸಿಐಡಿ ಪೊಲೀಸರು ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಉಡುಪಿ ಪೊಲೀಸರು ತನಿಖೆ ನಡೆಸುತ್ತಿದ್ದ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸೋಮವಾರ ಹಠಾತ್ ಸಿಐಡಿಗೆ ಒಪ್ಪಿಸಿದೆ. ಸಿಐಡಿ ಡಿವೈಎಸ್ಪಿ ಅಂಜುಮಾಲ ನಾಯಕ್ ನೇತೃತ್ವದಲ್ಲಿ ಸಿಐಡಿ ತಂಡ ಮಂಗಳವಾರ ಉಡುಪಿಗೆ ಆಗಮಿಸಿ ತನಿಖೆ ಆರಂಭಿಸಿದೆ. ಬುಧವಾರ ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ಅವರು ಕಾಲೇಜಿಗ ಭೇಟಿ ನೀಡಿ ಘಟನಾ...