ವಿಟ್ಲಇಡ್ಕಿದು ಕುಮೇರು ನಿವಾಸಿ ಅನುಮಾನಾಸ್ಪದ ಸಾವು ಪ್ರಕರಣ – ಪ್ರಿಯಕರನ ಜೊತೆ ಸೇರಿ ತಾಳಿಕಟ್ಟಿದ ಗಂಡನನ್ನೇ ಕೊಲೆಗೈದ ಪತ್ನಿ ; ಕೊಲೆ ಪ್ರಕರಣ ದಾಖಲು – ಇಬ್ಬರ ಬಂಧನ – ಕಹಳೆ ನ್ಯೂಸ್
ವಿಟ್ಲ, ಫೆ. 28 : ಇಡ್ಕಿದು ಕುಮೇರು ನಿವಾಸಿ ಅರವಿಂದ ಭಾಸ್ಕರ(39) ಅವರನ್ನು ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ದೃಢ ಪಟ್ಟಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅರವಿಂದ ಪತ್ನಿ ಆಶಾ ಹಾಗೂ ಮನೆಯ ಸೆಂಟ್ರಿಂಗ್ ಕೆಲಸ ನಿರ್ವಹಿಸಿದ ಯೋಗೀಶ ಗೌಡ ಆರೋಪಿಗಳಾಗಿದ್ದಾರೆ. ಅರವಿಂದ ಭಾಸ್ಕರ ಅವರು ಸುಮಾರು 2 ವರ್ಷಗಳಿಂದ ಹೊಸ ಮನೆಯನ್ನು ಕಟ್ಟಲು ಆರಂಭಿಸಿದ್ದು, ಅದರ ಸೆಂಟ್ರಿಂಗ್ ಕೆಲಸವನ್ನು ಯೋಗೀಶ ಗೌಡ...