Monday, November 25, 2024

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ – ಕಹಳೆ ನ್ಯೂಸ್

ಬೆಂಗಳೂರು: ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಮೈಕ್ರೋ ಲ್ಯಾಬ್ಸ್ ನೂರಾರು ಕೋಟಿಯ ಡೋಲೋ -650 ಮಾತ್ರೆ ಮಾರಾಟ ಮಾಡುವ ಮೂಲಕ ಅತೀ ಹೆಚ್ಚು ವ್ಯಾಪಾರ ವಹಿವಾಟು ನಡೆಸಿತ್ತು. ಆ ವೇಳೆ ತೆರಿಗೆ ವಂಚಿಸಿದ್ದ ಆರೋಪ ಹಿನ್ನೆಲೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ಮೈಕ್ರೋ ಲ್ಯಾಬ್ಸ್ ಕೇಂದ್ರ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಚೇರಿ ಅಲ್ಲದೇ ಸಿಎಂಡಿ...
ರಾಜ್ಯಶಿಕ್ಷಣಸುದ್ದಿ

ಪಿಯುಸಿ ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್‌ ; ಗೌರವಧನ ಹೆಚ್ಚಳ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಪಿಯುಸಿ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್‌ ನೀಡಿದೆ. ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈಗ ಪಿಯುಸಿ ಅತಿಥಿ ಉಪನ್ಯಾಸಕರ ಗೌರವಧನ 3 ಸಾವಿರ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ನೇಮಕಗೊಂಡು ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ನೀಡಲಾಗುತ್ತಿದ್ದ ಮಾಸಿಕ ಗೌರವಧನ 9,000 ರೂ.ನ್ನು ಪರಿಷ್ಕರಿಸಿ 12,000 ರೂ.ಗೆ ಹೆಚ್ಚಿಸಲಾಗಿದೆ. ಇತ್ತೀಚೆಗೆಷ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ...
ಉದ್ಯೋಗರಾಜ್ಯಶಿಕ್ಷಣಸುದ್ದಿ

ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ. 2022-23ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರ್ಕಾರಿ ಪಿಯುಸಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಸರ್ಕಾರ ಸೂಚಿಸಿದೆ. 3708 ಅತಿಥಿ ಉಪನ್ಯಾಸಕರ ನೇಮಕಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ವಿವಿಧ...
ಕ್ರೈಮ್ರಾಜ್ಯಸುದ್ದಿ

40 ಸೆಕೆಂಡ್‌ನಲ್ಲಿ 60 ಬಾರಿ ಚುಚ್ಚಿ ಕೊಲೆ ; ಗುರೂಜಿ ಚಂದ್ರಶೇಖರ್‌ ಹಂತಕರನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು – ಕಹಳೆ ನ್ಯೂಸ್

ಹುಬ್ಬಳ್ಳಿ: ಸರಳ ವಾಸ್ತು (Sarala Vastu) ಖ್ಯಾತಿಯ  ಗುರೂಜಿ ಚಂದ್ರಶೇಖರ್‌ (Chandrasekhar Guruji), ಹುಬ್ಬಳ್ಳಿಯ ಉಣಕಲ್‌ ಕೆರೆ ಬಳಿಯ ಪ್ರೆಸಿಡೆಂಟ್‌ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಈಗ ಕೃತ್ಯದ ಸಿಸಿಟಿವಿ ದೃಶ್ಯ ಲಭ್ಯವಾಗಿದ್ದು ಕೊಲೆಯ ಘೋರತೆ ಅನಾವರಣಗೊಂಡಿದೆ. ಇಬ್ಬರು ವ್ಯಕ್ತಿಗಳು ಹೋಟೆಲ್‌ ಲಾಬಿಯಲ್ಲಿ ಕುಳಿತಿದ್ದ ಚಂದ್ರಶೇಖರ್‌ ಗುರೂಜಿಯ ಆಶಿರ್ವಾದ ಪಡೆಯುವಂತೆ ಬರುತ್ತಾರೆ. ಇದ್ದಕ್ಕಿದ್ದಂತೆ ಇಬ್ಬರೂ ಚಾಕುವಿನಿಂದ ಬರ್ಬರವಾಗಿ ಹಲ್ಲೆ ಮಾಡಿ ಕೊನೆ...
ಬೆಂಗಳೂರುರಾಜ್ಯಸುದ್ದಿ

ಕರಾವಳಿ ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆ – ಪ್ರವಾಹ ಭೀತಿ ಸಾಧ್ಯತೆ ಎಂದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು, ಜು 05 : ಕರಾವಳಿ ಕರ್ನಾಟಕ, ಗೋವಾ ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದ್ದು, ಹಠಾತ್ ಪ್ರವಾಹ ಭೀತಿಯೂ ಎದುರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಕರ್ನಾಟಕ, ಕೊಂಕಣ ಮತ್ತು ಗೋವಾ ಭಾಗಗಳಲ್ಲಿ ಮಳೆಯಿಂದಾಗಿ ಪ್ರವಾಹ ಭೀತಿ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ನದಿಪಾತ್ರ, ಸಮುದ್ರ ತೀರಗಳಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದಿರಬೇಕು ಎಂದು ಇಲಾಖೆ ತಿಳಿಸಿರುವುದಾಗಿ ವರದಿಯಾಗಿದೆ....
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅಣ್ಣ ಗುಣರಂಜನ್ ಶೆಟ್ಟಿ ಕೊಲೆ ಸ್ಕೆಚ್ ಪ್ರಕರಣ ; ಮಂಗಳೂರು ಪೊಲೀಸ್ ನೋಟೀಸ್ ಹಿನ್ನಲೆ, ಗುಣರಂಜನ್ ಶೆಟ್ಟಿ ವಿಚಾರಣೆಗೆ ಹಾಜರು – ಕಹಳೆ ನ್ಯೂಸ್

ಮಂಗಳೂರು (ಜೂ.29): ಖ್ಯಾತ ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರ ಅಣ್ಣ ಗುಣ ರಂಜನ್ ಶೆಟ್ಟಿ (Gunaranjan Shetty ) ಕೊಲೆ ಸ್ಕೆಚ್ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ, ಮಂಗಳೂರು ಪೊಲೀಸರು (Mangaluru police) ಗುಣ ರಂಜನ್ ಶೆಟ್ಟಿಗೆ ನೋಟಿಸ್ ನೀಡಿದ್ದು, ಜೂನ್ 29 ರಂದು  ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಗೆ ಹಾಜರಾಗಲು ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ  ಗುಣರಂಜನ್ ಶೆಟ್ಟಿ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ...
ರಾಜ್ಯಸುದ್ದಿ

ಬೆಂಗಳೂರು :ವಿದ್ಯುತ್ ದರದಲ್ಲಿ ಹೆಚ್ಚಳವಿಲ್ಲ : ಸುನೀಲ್ ಕುಮಾರ್ ಸ್ಪಷ್ಟನೆ – ಕಹಳೆ ನ್ಯೂಸ್

ಬೆಂಗಳೂರು : ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಯಾವುದೇ ಸೂಚನೆ ನೀಡಿಲ್ಲ. ಕಲ್ಲಿದ್ದಲು ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮಾರುಕಟ್ಟೆ ದರ ಆಧರಿತ ಹೊಂದಾಣಿಕೆ ವೆಚ್ಚದಲ್ಲಿ ಮಾತ್ರ ವ್ಯತ್ಯಾಸವಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿದ್ಯುತ್ ದರ ಪರಿಷ್ಕರಣೆಗೆ ರಾಜ್ಯ ಸರಕಾರ ಮುಂದಾಗಿದೆ ಎಂಬ ಬಗ್ಗೆ ಕೆಲವೆಡೆ ತಪ್ಪು ಸಂದೇಶ ರವಾನೆಯಾಗಿದೆ. ಆದರೆ ರಾಜ್ಯ ಸರಕಾರದ ಮುಂದೆ ಅಂಥ ಯಾವುದೇ ಪ್ರಸ್ತಾಪವಿಲ್ಲ. ವಿದ್ಯುತ್ ದರವನ್ನು ವರ್ಷದಲ್ಲಿ ಒಮ್ಮೆ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಧರ್ಮದ್ವೇಷದ ಟ್ವೀಟ್‌ ತನಿಖೆಗೆ ಪತ್ರಕರ್ತ ಅಸಹಕಾರ, ಬೆಂಗಳೂರು ನಿವಾಸಿ, ಪತ್ರಕರ್ತ ಮೊಹಮ್ಮದ್‌ ಜುಬೇರ್‌ 4 ದಿನ ಪೊಲೀಸ್‌ ವಶಕ್ಕೆ! – ಕಹಳೆ ನ್ಯೂಸ್

ನವದೆಹಲಿ(ಜೂ.29): 2018ರಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಧರ್ಮದ್ವೇಷದ ಕಿಚ್ಚು ಹೊತ್ತಿಸುವ ಟ್ವೀಟ್‌ ಮಾಡಿದ್ದರು ಎನ್ನಲಾದ ‘ಆಲ್ಟ್‌ನ್ಯೂಸ್‌’ ಆನ್‌ಲೈನ್‌ ಮಾಧ್ಯಮದ ಸಂಸ್ಥಾಪಕ ಹಾಗೂ ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಅವರನ್ನು ದಿಲ್ಲಿ ನ್ಯಾಯಾಲಯ ಮಂಗಳವಾರ 4 ದಿನಗಳ ಕಾಲ ಪೊಲೀಸ್‌ ವಶಕ್ಕೆ ಒಪ್ಪಿಸಿದೆ. ಇನ್ನೊಂದೆಡೆ ಅವರು 2018ರ ಧರ್ಮದ್ವೇಷದ ವಿವಾದಿತ ಟ್ವೀಟ್‌ ಬಗ್ಗೆ ಹಾರಿಕೆ ಉತ್ತರ ನೀಡುತ್ತಿದ್ದಾರೆ. ತಮ್ಮದೇ ಆದ ವಿವಾದಿತ ಟ್ವೀಟನ್ನೂ ಅವರು ಖಚಿತಪಡಿಸುತ್ತಿಲ್ಲ ಎಂದು ತಿಳಿದುಬಂದಿದೆ. ಅಲ್ಲದೆ, ತಾವು...
1 100 101 102 103 104 154
Page 102 of 154