ಮಂಗಳೂರು ರಾಮಕೃಷ್ಣ ಮಠಕ್ಕೆ 75 ಸಂವತ್ಸರಗಳು ; ಜೂನ್ 3 ಮತ್ತು 4ರಂದು ಅಮೃತ ಮಹೋತ್ಸವ ಕಾರ್ಯಕ್ರಮ – ಸ್ವಾಮಿ ಗೌತಮಾನಂದಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿ – ಕಹಳೆ ನ್ಯೂಸ್
ಮಂಗಳೂರು: ನಗರದ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠಕ್ಕೆ 75 ಸಂವತ್ಸರಗಳು ತುಂಬುತ್ತಿದ್ದು, ಅಮೃತ ಮಹೋತ್ಸವದ ಅಂಗವಾಗಿ ಜೂನ್ 3 ಮತ್ತು 4ರಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಠದ ಸ್ವಾಮಿ ಜಿತಕಾಮಾನಂದಜಿ ತಿಳಿಸಿದರು. ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘3ರಂದು ಬೆಳಿಗ್ಗೆ 6.30ಕ್ಕೆ ವಿಶೇಷ ಪೂಜೆ, ಹೋಮಹವನ, ಬೆಳಿಗ್ಗೆ 8.15ಕ್ಕೆ ಮಂಗಳಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಸ್ವಾಮಿ ಗೌತಮಾನಂದಜಿ ಮಹಾರಾಜರ ಸಾನ್ನಿಧ್ಯದಲ್ಲಿ ಭಕ್ತರ ಶೋಭಾಯಾತ್ರೆ ಮಠದವರೆಗೆ ನಡೆಯಲಿದೆ. 9.15ಕ್ಕೆ...