Saturday, November 23, 2024

ರಾಜ್ಯ

ರಾಜ್ಯ

ರಾಜ್ಯಾದ್ಯಂತ ಇಂದಿನಿಂದ ಪದವಿ ಕಾಲೇಜುಗಳು ರೀಓಪನ್​ – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್-19 ಸೋಂಕು ಕಾರಣಕ್ಕಾಗಿ ಮಾರ್ಚ್‌ನಿಂದ ಮುಚ್ಚಿರುವ ಪದವಿ, ವಿಶ್ವವಿದ್ಯಾನಿಲಯಗಳ ತರಗತಿ ಕೊಠಡಿಗಳ ಬಾಗಿಲುಗಳು ಇಂದಿನಿಂದ ಸಕಲ ಸುರಕ್ಷಾ ಕ್ರಮದೊಂದಿಗೆ ಮತ್ತೆ ತೆರೆಯಲಿವೆ. ಜತೆಗೆ 2020-21ನೇ ಸಾಲಿನ ಶೈಕ್ಷಣಿಕ ವರ್ಷವೂ ಅಧಿಕೃತವಾಗಿ ಇಂದಿನಿಂದಲೇ ಆರಂಭವಾಗಲಿದೆ. ರಾಜ್ಯ ಸರಕಾರ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ವಿ.ವಿ.ಗಳು ಹಾಗೂ ಕಾಲೇಜು ಆಡಳಿತ ಮಂಡಳಿಗಳು ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿವೆ. ತರಗತಿ ಕೊಠಡಿಯ ಬೋಧನೆಯ ಜತೆಗೆ ಆನ್‌ಲೈನ್‌ ಹಾಗೂ ಆಫ್ ಲೈನ್‌ ಬೋಧನೆಗಳು...
ರಾಜ್ಯ

ಪದವಿ, ಸ್ನಾತಕೋತ್ತರ ಪದವಿ ತರಗತಿಗಳು ನ.17ರಿಂದ ಕಾಲೇಜು ಆರಂಭ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ನ.17ರಿಂದ ಆರಂಭಗೊಳ್ಳಲಿವೆ ಎಂದು ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಂ. ಜೆ ರೂಪ ತಿಳಿಸಿದರು. ದ.ಕ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್‌-19 ಹಿನ್ನಲೆಯಲ್ಲಿ ವಿಶ್ವವಿದ್ಯಾಲಯ, ಖಾಸಗಿ ವಿಶ್ವವಿದ್ಯಾಲಯ, ಸರ್ಕಾರಿ, ತಾಂತ್ರಿಕ, ಡಿಪ್ಲೋಮ, ಅನುದಾನ, ಅನುದಾನ ರಹಿತ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಪ್ರಾಮಾಣಿತ ವಿಧಾನ-ಮಾರ್ಗಸೂಚಿಯ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತೀ ದಿನ ಕಾಲೇಜು...
ರಾಜ್ಯ

ಯಾವುದೇ ಕ್ಷಣದಲ್ಲಿ ಗ್ರಾ.ಪಂ ಚುನಾವಣೆ ಘೋಷಣೆ ಸಾಧ್ಯತೆ, ಗ್ರಾಮಗಳಲ್ಲಿ ಗರಿಗೆದರಿದ ರಾಜಕೀಯ..! – ಕಹಳೆ ನ್ಯೂಸ್

ಬೆಂಗಳೂರು - ಗ್ರಾಮ ಪಂಚಾಯತ್ ಚುನಾವಣೆಗೆ ದಿನಗಣನೆ ನಡೆಯುತ್ತಿದೆ. ಯಾವಾಗ ಬೇಕಾದರೂ ಚುನಾವಣೆ ದಿನಾಂಕ ಘೋಷಣೆಯಾಗಬಹುದಾಗಿದ್ದು, ಸಂಭಾವ್ಯ ಅಭ್ಯರ್ಥಿಗಳ ಚಟುವಟಿಕೆಗಳು ಗ್ರಾಮಗಳಲ್ಲಿ ಬಿರುಸು ಪಡೆದುಕೊಂಡಿದೆ. ಸಂಭಾವ್ಯ ಅಭ್ಯರ್ಥಿಗಳಂತೂ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರಚಾರ, ಗ್ರಾಮ ಮಟ್ಟದಲ್ಲಿ ಆಗಬೇಕಾದ ಕೆಲಸಗಳ ಬಗ್ಗೆಯೇ ಪ್ರಮುಖವಾಗಿ ಪ್ರಸ್ತಾಪಿಸಿ, ಜನ ರನ್ನು ಸೆಳೆಯುವತ್ತ ಈಗಾಗಲೇ ತಾಲೀಮು ನಡೆಸತೊಡಗಿದ್ದಾರೆ. ರಾಜಕೀಯ ಪಕ್ಷಗಳೂ ಅಭ್ಯರ್ಥಿಗಳನ್ನು ಬೆಂಬಲಿಸುವ ಬಗ್ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಚುನಾವಣೆ ರಣಕಣವನ್ನು ಮತ್ತಷ್ಟು ರಂಗೇರಿಸುವಂತೆ ಮಾಡಿದೆ. ತಾಲೂಕುವಾರು...
ರಾಜ್ಯಸುದ್ದಿ

ದೇವಸ್ಥಾನ, ಮಠಗಳಿಗೆ ರಾಜ್ಯ ಸರ್ಕಾರದಿಂದ ದೀಪಾವಳಿ ಉಡುಗೊರೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯದದ ಹಲವು ದೇವಾಲಯಗಳು ಹಾಗೂ ಮಠಗಳು, ಧಾರ್ಮಿಕ ಸಂಸ್ಥೆಗಳಿಗೆ 88.75 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. 2019 -20 ಮತ್ತು 2020 - 21 ನೇ ಸಾಲಿನ ಬಜೆಟ್ ನಲ್ಲಿ ಮಠ-ಮಂದಿರ, ಧಾರ್ಮಿಕ ಸಂಸ್ಥೆಗಳಿಗೆ ಅನುದಾನ ಘೋಷಣೆ ಮಾಡಿದ್ದರೂ, ಕಾರಣಾಂತರದಿಂದ ಅನುದಾನ ಬಿಡುಗಡೆ ಮಾಡಿರಲಿಲ್ಲ. ಈಗ ಸಿಎಂ ಯಡಿಯೂರಪ್ಪ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಮುಜರಾಯಿ ಖಾತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ....
ರಾಜ್ಯ

ದೆಹಲಿ ವರಿಷ್ಠರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ ಸಿಎಂ ಬಿಎಸ್‍ವೈ..! -ಕಹಳೆ ನ್ಯೂಸ್

ಬೆಂಗಳೂರು- ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರುಗಳ ದಿಢೀರ್ ಭೇಟಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ದೆಹಲಿ ವರಿಷ್ಠರಿಗೆ ಎಚ್ಚರಿಕೆಯ ಸಂದೇಶ ರವಾನೆಯಾಗಿದೆ ಎನ್ನಲಾಗುತ್ತಿದೆ. ಬಿ.ಎಸ್.ಯಡಿಯೂರಪ್ಪ ನಾಯಕತ್ವವನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ಪುಕಾರು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಒಂದು ವೇಳೆ ನನ್ನ ತೀರ್ಮಾನಕ್ಕೆ ವಿರುದ್ದವಾಗಿ ನಾಯಕತ್ವ ಬದಲಾವಣೆ ಮಾಡುವಂತಹ ದುಸ್ಸಾಹಕ್ಕೆ ಕೈ ಹಾಕಿದರೆ ತಮ್ಮ ಮುಂದಿನ ದಾರಿ ಏನಾಗಿರುತ್ತದೆ ಎಂಬ ಮುನ್ಸೂಚನೆಯನ್ನು ದೆಹಲಿ ನಾಯಕರಿಗೆ ಮುಟ್ಟಿಸಿದ್ದಾರೆ...
ರಾಜ್ಯ

ರಾಜ್ಯ ಸರ್ಕಾರದಿಂದ ಇಂದಿನಿಂದ ‘ಗ್ರೀನ್ ಪಟಾಕಿ ಮಾರಾಟ’ಕ್ಕೆ ಅನುಮತಿ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ರೋಗಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಕಾರಣದಿಂದಾಗಿ ಪಟಾಕಿಯನ್ನು ನಿಷೇಧಿಸಿತ್ತು. ಆದ್ರೇ ಹಸಿರು ಪಟಾಕಿ ಹೊಡೆದು, ದೀಪಾವಳಿ ಹಬ್ಬ ಆಚರಣೆಗೆ ಅನುಮತಿಸಿತ್ತು. ಇಂತಹ ಹಸಿರು ಪಟಾಕಿ ಮಾರಾಟಕ್ಕೆ ಇಂದಿನಿಂದ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಸಿರು ಪಟಾಕಿ ಮಾರಾಟ ಹಾಗೂ ಮಾರಾಟಕ್ಕೆ ಲೈಸೆನ್ಸ್ ಪಡೆಯೋದಕ್ಕೆ ಇಂದಿನಿಂದ ಆರಂಭವಾಗಲಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಸಿರು ಪಟಾಕಿ ಮಾರಾಟಕ್ಕೆ...
ರಾಜ್ಯಶಿಕ್ಷಣ

ಶಾಲೆ ಆರಂಭದ ಬಗ್ಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ :ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಶಾಲೆ ಆರಂಭದ ಬಗ್ಗೆ ಕುರಿತಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ವೈ, ರಾಜ್ಯದಲ್ಲಿ ಶಾಲೆ ಆರಂಭದ ಕುರಿತಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ಸಚಿವರ ಸಮ್ಮುಖದಲ್ಲಿ ಶಾಲೆ ಆರಂಭದ ಕುರಿತಂತೆ ಚರ್ಚೆ ನಡೆಸುತ್ತೇವೆ. ಸಚಿವರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು...
ರಾಜಕೀಯರಾಜ್ಯ

ಬಿಜೆಪಿಯಲ್ಲಿ ತೀವ್ರವಾಗಿದೆ ಸಂಪುಟ ಪುನರ್ರಚನೆ, ವಿಸ್ತರಣೆ ಚರ್ಚೆ – ಕಹಳೆ ನ್ಯೂಸ್

ಬೆಂಗಳೂರು: ಕಳೆದ ಸೆಪ್ಟೆಂಬರ್ ನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ನೊಂದಿಗೆ ಚರ್ಚಿಸಲು ದೆಹಲಿಗೆ ಹೋಗಿದ್ದಾಗ ಚರ್ಚೆ ನಡೆಸಿ ಬಂದಿದ್ದರಷ್ಟೆ, ಅಂತಿಮ ಒಪ್ಪಿಗೆ ಸಿಕ್ಕಿರಲಿಲ್ಲ. ನಂತರ ಬಿಹಾರ ಚುನಾವಣೆ, ನಮ್ಮ ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆಗಳು ಬಂದವು. ಇದೀಗ ಸಂಪುಟ ವಿಸ್ತರಣೆ ಬಗ್ಗೆ ಏನು ತೀರ್ಮಾನ ಕೈಗೊಳ್ಳುತ್ತದೆ ಹೈಕಮಾಂಡ್ ಎಂಬುದು ಕುತೂಹಲ. ನಾಳೆ ಬಿಹಾರ ಮತ್ತು ಉಪ ಚುನಾವಣೆಗಳ ಫಲಿತಾಂಶ ಪ್ರಕಟವಾಗಲಿದೆ. ಸಂಪುಟ...
1 139 140 141 142 143 154
Page 141 of 154