ಗ್ರಾಮ ಪಂಚಾಯತಿ ಚುನಾವಣೆಗೆ ಸಿದ್ಧರಿದ್ದೇವೆ: ನಳಿನ್ ಕುಮಾರ್ ಕಟೀಲ್-ಕಹಳೆ ನ್ಯೂಸ್
ಮೈಸೂರು: ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಗ್ರಾಮ ಪಂಚಾಯತಿ ಚುನಾವಣೆ ಎದುರಿಸಲು ಸಿದ್ಧರಿದ್ದೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾದಲ್ಲಿ ವಾಸ್ತವ ಸ್ಥಿತಿ ಬದಲಾಗಿದೆ. ಇತರೆ ಪಕ್ಷಗಳ ನಾಯಕರು ಹಾಗೂ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಟ್ರೆಂಡ್ ಬದಲಾಗುತ್ತಿದ್ದು, ಜನರು ಪ್ರಧಾನಿ ಮೋದಿ ಹಾಗೂ ಬಿಎಸ್ ಯಡಿಯೂರಪ್ಪ ಅವರ ನಾಯಕತ್ವದ ಕುರಿತು ಸಂತಸ...