ಬ್ರೇಕಿಂಗ್ : ನಟಿ ರಾಗಿಣಿ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ..! – ಕಹಳೆ ನ್ಯೂಸ್
ಬೆಂಗಳೂರು,ಸೆ.7- ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಸಿದಂತೆ ಸಿಸಿಬಿ ವಶದಲ್ಲಿರುವ ಚಿತ್ರನಟಿ ರಾಗಿಣಿ ದ್ವಿವೇದಿ ಅವರನ್ನು ಮತ್ತೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಸಿದಂತೆ ಸಿಸಿಬಿ ವಶದಲ್ಲಿರುವ ರಾಗಿಣಿ ದ್ವಿವೇದಿ ಅವರು ಮಹಿಳಾ ಸಾಂತ್ವಾನ ಕೇಂದ್ರದಲ್ಲಿದ್ದು, ಅಲ್ಲಿಂದಲೇ ವಿಡಿಯೋ ಕಾನರೆನ್ಸ್ ಮೂಲಕ ವಿಚಾರಣೆ ನಡೆಸಿದ 1ನೇ ಎಸಿಎಂಎಂ ನ್ಯಾಯತಾಲಯದ ನ್ಯಾಯಾೀಶರಾದ ಜಗದೀಶ್ ಅವರು ಐದು ದಿನಗಳ ಕಾಲ ರಾಗಿಣಿ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲು ಆದೇಶಿಸಿದರು....